ಕೋಟಿ-ಚೆನ್ನಯ ಟ್ರೋಫಿ ಅಂತರ್‌ಜಿಲ್ಲಾ ಮಟ್ಟದ ಲೀಗ್ ಮಾದರಿಯ ಮ್ಯಾಟ್ ಕಬಡ್ಡಿ ಪಂದ್ಯಾಟ

ಬೆಳ್ತಂಗಡಿ: ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾಸಂಘ ಇದರ ಆಶ್ರಯದಲ್ಲಿ ಯುವ ಬಿಲ್ಲವ ವೇದಿಕೆ, ಮಹಿಳಾ ಬಿಲ್ಲವ ವೇದಿಕೆ ಇದರ ಸಹಯೋಗದೊಂದಿಗೆ ಪ್ರಥಮ ವರ್ಷದ ಕೋಟಿ ಚೆನ್ನಯ ಟ್ರೋಫಿಅಂತರ್ ಜಿಲ್ಲಾ ಮಟ್ಟದ ಲೀಗ್ ಮಾದರಿಯ ಮ್ಯಾಟ್ ಕಬಡ್ಡಿ ಪಂದ್ಯಾಟ ಮೇ.5 ರಂದು ಬೆಳ್ತಂಗಡಿ ಶ್ರೀ ಗುರುದೇವ ಕಾಲೇಜು ಕ್ರೀಡಾಂಗಣದಲ್ಲಿ  ಜರುಗಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ಮಾಜಿ ಶಾಸಕ ವಸಂತ ಬಂಗೇರ  ನೆರವೇರಿಸಿ, ಪಂದ್ಯಾಟಕ್ಕೆ ಶುಭ ಹಾರೈಸಿದರು . ಈ ಸಂದರ್ಭದಲ್ಲಿ  ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ ಬೆಳ್ತಂಗಡಿ ಅಧ್ಯಕ್ಷ ಸೋಮನಾಥ ಬಂಗೇರ ವರ್ಪಾಳೆ , ಸಂಘದ ಮಾಜಿ ಅಧ್ಯಕ್ಷ ಪೀತಾಂಬರ ಹೇರಾಜೆ, ಜಯರಾಮ ಬಂಗೇರ , ಸಂಘಬೆಟ್ಟು ಕ್ಷೇತ್ರದ  ಜಿ.ಪಂ. ಸದಸ್ಯ ತುಂಗಪ್ಪ ಬಂಗೇರ , ನಾರಾವಿ ಜಿ.ಪಂ ಸದಸ್ಯ  ಧರಣೇಂದ್ರ ಕುಮಾರ್ , ಯುವ ಬಿಲ್ಲವ ವೇದಿಕೆಯ ಅಧ್ಯಕ್ಷ ಸಂತೋಷ್ ಕುಮಾರ್ ಉಪ್ಪಾರು, ಕಾರ್ಯದರ್ಶಿ ರಾಕೇಶ್ ಮೂಡುಕೋಡಿ, ಸಂಘಟನಾ ಕಾರ್ಯದರ್ಶಿ ಸಚಿನ್ ಕುಮಾರ್ ನೂಜೋಡಿ, ಮಹಿಳಾ ಬಿಲ್ಲವ ವೇದಿಕೆ ಅಧ್ಯಕ್ಷೆ  ರಾಜಶ್ರೀ ರಮಣ್, ಉಪಾಧ್ಯಕ್ಷೆ ಸುಜಿತಾ ವಿ ಬಂಗೇರ, ಮತ್ತಿತರ ಗಣ್ಯರು, ಸಂಘದ ನಿರ್ದೇಶಕರು ಉಪಸ್ಥಿತರಿದ್ದರು

ಹೊನಲು ಬೆಳಕಿನ ಈ ಕಬಡ್ಡಿ ಪಂದ್ಯಾಟದಲ್ಲಿ ರಾಷ್ಟ್ರ- ರಾಜ್ಯ ಮತ್ತು ವಿವಿಧ ವಿಶ್ವವಿದ್ಯಾನಿಲಯವನ್ನು ಪ್ರತಿನಿಧಿಸಿದ ದ.ಕ, ಉಡುಪಿ, ಉತ್ತರ ಕನ್ನಡ, ಕಾಸರಗೋಡು ಜಿಲ್ಲೆಗಳ ಪ್ರತಿಭಾನ್ವಿತ ಬಿಲ್ಲವ ಕ್ರೀಡಾಪಟುಗಳು ಭಾಗವಹಿಸಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.