ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನ ಬ್ರಹ್ಮಕಲಶೋತ್ಸವ ಭರದ ಸಿದ್ಧತೆ

ಬೆಳಾಲು: ಇಲ್ಲಿಯ ಅನಂತೋಡಿಯಲ್ಲಿ ನೂತನ ಶಿಲಾಮಯ ದೇವಸ್ಥಾನ ಶ್ರೀ ಅನಂತಪದ್ಮನಾಭ ದೇವಸ್ಥಾನದ ಪ್ರತಿಷ್ಠಾಷ್ಠಬಂಧ ಬ್ರಹ್ಮಕಲಶೋತ್ಸವ ಮೇ.11 ರಿಂದ 20 ರವರೆಗೆ ಜರುಗಲಿದ್ದು, ಇದರ ಪೂರ್ವಸಿದ್ಧತಾ ಸಭೆ ಮೇ.5 ರಂದು ಅನಂತೋಡಿ ಭಜನಾ ಮಂದಿರದಲ್ಲಿ ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಆನಂದ ಆಚಾರ್ಯರ ಅಧ್ಯಕ್ಷತೆಯಲ್ಲಿ ಜರುಗಿತು.
ಮುಖ್ಯ ಅತಿಥಿಗಳಗಿ ಭಾಗವಹಿಸಿದ್ದ ಶ್ರೀ ಕ್ಷೇತ್ರ ಧರ್ಮಸ್ಥಳ ಅನ್ನಪೂರ್ಣ ಛತ್ರದ ಮೆನೇಜರ್ ಸುಬ್ರಹ್ಮಣ್ಯಪ್ರಸಾದ್ ಭಾಗವಹಿಸಿ, ಸಲಹೆ ಸೂಚನೆ ನೀಡಿದರು. ಸಭೆಯಲ್ಲಿ ಉಪಸಮಿತಿಗಳ ಸಂಚಾಲಕರು ಪೂರ್ವ ಸಿದ್ಧತೆಯ ಬಗ್ಗೆ ವಿವರ ನೀಡಿದರು.
ಈ ಸಂದರ್ಭದಲ್ಲಿ ಆಡಳಿತ ಮೊಕ್ತೇಸರ ಜೀವಂಧರ ಕುಮಾರ್ ಬೆಳಾಲುಗುತ್ತು, ಬ್ರಹ್ಮಕಲಶೋತ್ಸವ ಸಮಿತಿ ಕಾಯಾಧ್ಯಕ್ಷ ಎನ್.ಜತ್ತನ್ನ ಗೌಡ, ಪ್ರಧಾನ ಕಾರ್ಯದರ್ಶಿ ಅಸ್ರಣ್ಣ ಗಿರೀಶ್ ಬಾರಿತ್ತಾಯ, ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷ ಶ್ರೀನಿವಾಸ ಗೌಡ, ಕಾರ್ಯಾಧ್ಯಕ್ಷ ತಿಮ್ಮಪ್ಪ ಗೌಡ ಬನಂದೂರು, ಪ್ರಧಾನ ಕಾರ್ಯದರ್ಶಿ ದುರ್ಗಾಪ್ರಸಾದ್ ಕೆರ್ಮುಣ್ಣಾಯ ಉಪಸ್ಥಿತರಿದ್ದರು.
ಅಧ್ಯಾಪಕ ಸೀತಾರಾಮ ಗೌಡ ಸ್ವಾಗತಿಸಿ, ನಿರೂಪಿಸಿದರು. ಪ್ರಚಾರ ಸಮಿತಿ ಸಂಚಾಲಕ ಶಿವಪ್ರಸಾದ್ ಕೆ ವಂದಿಸಿದರು. ಎಲ್ಲಾ ಸಮಿತಿಗಳ ಸಂಚಾಲಕರು, ಸದಸ್ಯರು, ಊರವರು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.