ತಾ.ಪಂ ಕಾರ್ಯನಿರ್ವಹಣಾಧಿಕಾರಿ ಕೆ. ಇ ಜಯರಾಂ ಅಧಿಕಾರ ಸ್ವೀಕಾರ

Advt_NewsUnder_1
Advt_NewsUnder_1

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಪಂಚಾಯತದ ನೂತನ ಕಾರ್ಯನಿರ್ವಾಹಣಾಧಿಕಾರಿಯಾಗಿ ಕೆ.ಇ ಜಯರಾಂ ಅವರು ಮೇ.2 ರಂದು ಅಧಿಕಾರ ಸ್ವೀಕರಿಸಿದ್ದಾರೆ.
ಶೃಂಗೇರಿ ಕೊಪ್ಪದ ತಾಲೂಕು ಪಂಚಾಯತದಲ್ಲಿ ಕಾರ್ಯನಿರ್ವಹಣಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದ ಇವರು ಬೆಳ್ತಂಗಡಿ ತಾಲೂಕು ಪಂಚಾಯತಕ್ಕೆ ವರ್ಗಾವಣೆಗೊಂಡು ಆಗಮಿಸಿದ್ದಾರೆ. ಬೆಳ್ತಂಗಡಿ ತಾ.ಪಂದಲ್ಲಿ ಕಾರ್ಯನಿರ್ವಹಣಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಬಸವರಾಜ್ ಅಯ್ಯಣ್ಣನವರ್ ಅವರು ನಿವೃತ್ತಿಯಾದ ನಂತರ ಈ ಹುದ್ದೆ ಖಾಲಿಯಾಗಿತ್ತು. ಇದುವರೆಗೆ ಪ್ರಭಾರ ನೆಲೆಯಲ್ಲಿ ಉದ್ಯೋಗ ಖಾತರಿ ಯೋಜನೆಯ ಸಹಾಯಕ ನಿರ್ದೇಶಕ ಕುಸುಮಾಧರ್ ಅವರು ಕಾರ್ಯನಿರ್ವಹಿಸುತ್ತಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.