ಬೆಳ್ತಂಗಡಿ ತಾಲೂಕು ಕಛೇರಿಯಲ್ಲಿ ಶ್ರೀ ಶಂಕರಾಚಾರ್ಯ ಜಯಂತಿ ಆಚರಣೆ

ಬೆಳ್ತಂಗಡಿ: ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಅದ್ವೈತ ಸಿದ್ಧಾಂತದ ಪ್ರತಿಪಾದಕ ಶ್ರೀ ಶಂಕರಾಚಾರ್ಯ ಜಯಂತಿ ಕಾರ್ಯಕ್ರಮವನ್ನು ಆಚರಿಸಲಾಯಿತು.
ಬೆಳ್ತಂಗಡಿ ತಾಲೂಕು ತಹಸೀಲ್ದಾರ್ ಗಣಪತಿ ಶಾಸ್ತ್ರಿ, ಕ್ಷೇತ್ರ ಶಿಕ್ಷಣಾಧಿಕಾರಿ ಸತೀಶ್ ಪಿ, ಮೆಸ್ಕಾಂ ಸಹಾಯಕ ಕಾರ್ಯಪಾಲಕ ಅಭಿಯಂತರ ಶಿವಶಂಕರ್ ರವರು ಶ್ರೀ ಶಂಕರಾಚಾರ್ಯರ ಭಾವಚಿತ್ರಕ್ಕೆ ಮಾಲಾರ್ಪಣೆಗೈದು, ದೀಪಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಕಂದಾಯ ನಿರೀಕ್ಷಕ ಪವಾಡಪ್ಪ ದೊಡ್ಮನಿ, ಉಪತಹಸೀಲ್ದಾರ್ ಶಂಕರ, ಚುನಾವಣಾ ಕಛೇರಿ ಶಿರಸ್ತೆದಾರ ನಾರಾಯಣ ಗೌಡ, ತಾಲೂಕು ಕಛೇರಿ ಸಿಬ್ಬಂದಿ ಹೇಮಾವತಿ ಮತ್ತಿತರರು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.