ಉಜಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದಲ್ಲಿ ಇತ್ತೀಚೆಗೆ ನಡೆದ ಘಟಿಕೋತ್ಸವದಲ್ಲಿ ಡಾ.ವೃಂದಾ ಬೇಡೇಕರ್ರಿಗೆ ಎಂ.ಡಿ (ಕ್ಲಿನಿಕಲ್ ಯೋಗ) ಪದವಿಯನ್ನು ಪ್ರದಾನ ಮಾಡಲಾಯಿತು. ಇವರು ಆಳ್ವಾಸ್ನಲ್ಲಿ ಯೋಗ ವಿಜ್ಞಾನ ವಿಭಾಗದ ಮುಖ್ಯಸ್ಥೆ. ಶ್ರೀ ಧರ್ಮಸ್ಥಳ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನ ಕಾಲೇಜಿನ ಹಳೇ ವಿದ್ಯಾರ್ಥಿನಿ. ಕೌನ್ಸಿಲಿಂಗ್ ಮತ್ತು ಸೈಕೋಥೆರಪಿಯಲ್ಲಿ ಎಂಎಸ್ ಪದವಿಯನ್ನು ಕುವೆಂಪು ವಿಶ್ವವಿದ್ಯಾನಿಲಯದಲ್ಲಿ ಪಡೆದಿರುತ್ತಾರೆ. ಇವರ ಪತಿ ಯೋಗೀಶ ಬೇಡೇಕರ್ ಆಳ್ವಾಸ್ನಲ್ಲಿ ಪ್ರಾಧ್ಯಾಪಕರಾಗಿದ್ದಾರೆ.