HomePage_Banner_
HomePage_Banner_
HomePage_Banner_
HomePage_Banner_
HomePage_Banner_
HomePage_Banner_

ಬೆಳಾಲು ಶ್ರೀ ಅನಂತಪದ್ಮನಾಭ ದೇವಸ್ಥಾನಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಮತ್ತೆ5 ಲಕ್ಷರೂ ದೇಣಿಗೆ

ಬೆಳಾಲು: ಇಲ್ಲಿಯ ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನದಲ್ಲಿ ದೇವರ ನೂತನ ಬಿಂಬ ಪ್ರತಿಷ್ಠಾಷ್ಟಬಂಧ ಬ್ರಹ್ಮಕಲಶೋತ್ಸವ ಮೇ.11 ರಿಂದ ಮೇ. 20 ರವರೆಗೆ ನಡೆಯಲಿದ್ದು, ದೇವಾಲಯಕ್ಕೆ ಡಾ| ವೀರೇಂದ್ರ ಹೆಗ್ಗಡೆಯವರು ಮಂಜೂರು ಮಾಡಿದ 5 ಲಕ್ಷ ರೂ. ಮೊತ್ತದ ಚೆಕ್ಕನ್ನು ಮೇ.11 ರಂದು ಧರ್ಮಸ್ಥಳ ಜಮಾ ಉಗ್ರಾಣದ ಮುತ್ಸದಿ ಬಿ.ಭುಜಬಲಿ ಹಾಗೂ ಕೃಷಿ ವಿಭಾಗದ ಮುಖ್ಯಸ್ಥ ಬಾಲಕೃಷ್ಣ ಪೂಜಾರಿ ಬಜ ಇವರು ದೇವಳದ ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಆನಂದ ಆಚಾರ್ಯ ರಿಗೆ ಹಸ್ತಾಂತರಿಸಿದರು.
ಶ್ರೀ ಕ್ಷೇತ್ರದಿಂದ ಈ ಹಿಂದೆಯೂ ದೇವಸ್ಥಾನಕ್ಕೆ 15 ಲಕ್ಷ ರೂ.ಗಳನ್ನು ನೀಡಲಾಗಿತ್ತು. ಚೆಕ್ ವಿತರಣೆ ವೇಳೆ ದೇವಳದ ಬ್ರಹ್ಮಕಲಶೋತ್ಸವ ಸಮಿತಿ ಕಾರ್ಯಾಧ್ಯಕ್ಷ ಜತ್ತಣ್ಣ ಗೌಡ ಯನ್, ಜೀರ್ಣೋದ್ಧಾರ ಸಮಿತಿ ಕಾಯಾಧ್ಯಕ್ಷ ಪಿ.ತಿಮ್ಮಪ್ಪ ಗೌಡ, ಮತ್ತಿತರ ಗಣ್ಯರು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.