HomePage_Banner_
HomePage_Banner_
HomePage_Banner_
HomePage_Banner_
HomePage_Banner_
HomePage_Banner_

ಇವಿಎಂ-ವಿವಿಪ್ಯಾಟ್ ಮತ ತಾಳೆ :ಎಣಿಕೆ ನಿಧಾನ-ಫಲಿತಾಂಶ ವಿಳಂಬ

ಬೆಳ್ತಂಗಡಿ: ಈ ಬಾರಿ ಲೋಕಸಭಾ ಚುನಾವಣೆ ಮತ ಎಣಿಕೆ ಸಂದರ್ಭ ಇವಿಎಂ-ವಿವಿಪ್ಯಾಟ್ ಮತಗಳ ತಾಳೆ ಹಾಕುವಲ್ಲಿ ಸುಪ್ರೀಂ ಕೋರ್ಟ್ ಆದೇಶ ಪಾಲಿಸಬೇಕಾಗಿರುವುದರಿಂದ ಮತ ಎಣಿಕೆ ನಿಧಾನವಾಗಲಿದ್ದು, ಫಲಿತಾಂಶವೂ ವಿಳಂಬವಾಗಲಿದೆ.
ಸುಪ್ರೀಂ ಕೋರ್ಟ್ ನಿದೇಶನದಂತೆ ಇವಿಎಂ-ವಿವಿಪ್ಯಾಟ್ ಮತಗಳನ್ನು ತಾಳೆ ಮಾಡಬೇಕಾಗಿದ್ದು, ಇದಕ್ಕೆ ಸಾಕಷ್ಟು ಸಮಯ ಹಿಡಿಯಲಿದೆ. ಪ್ರತಿ ವಿಧಾನ ಸಭಾ ಕ್ಷೇತ್ರದ ೫ ಮತಗಟ್ಟೆಗಳ ವಿವಿಪ್ಯಾಟ್ ಚೀಟಿಗಳನ್ನು ಎಣಿಕೆ ಮಾಡಬೇಕು. ಒಂದು ವಿವಿಪ್ಯಾಟ್‌ನ ಚೀಟಿ ಎಣಿಕೆಗೆ ಕನಿಷ್ಠ 45 ನಿಮಿಷ ಬೇಕು.
ಸುಪ್ರೀಂ ಕೋರ್ಟ್ ಆದೇಶದ ಅನುಸಾರ ಮತ ಎಣಿಕೆಗೆ ಸಾಕಷ್ಟು ಸಮಯ ಹಿಡಿಯಲಿದೆ. ಒಂದು ವಿವಿಪ್ಯಾಟ್‌ನ ಚೀಟಿಗಳ ಎಣಿಕೆಗೆ ಕನಿಷ್ಠ 45 ನಿಮಿಷ ಬೇಕು. ಹೀಗಾಗಿ ಈ ಬಾರಿ ಒಟ್ಟಾರೆ ಅಂತಿಮ ಫಲಿತಾಂಶ ಹೊರಬರಲು ರಾತ್ರಿ 8 ಗಂಟೆ ಅಗಬಹುದು ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿ ಸಂಜೀವ್ ಕುಮಾರ್  ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ

Advt_NewsUnder_
Advt_NewsUnder_

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.