HomePage_Banner_
HomePage_Banner_
HomePage_Banner_
HomePage_Banner_
HomePage_Banner_
HomePage_Banner_

ಚಂದ್ಕೂರು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನ ಬ್ರಹ್ಮಕಲಶೋತ್ಸವ: ಧಾರ್ಮಿಕ ಸಭೆ

ಲಾಯಿಲ:  ಚಂದ್ಕೂರು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನ ಪುನರ್ ಪ್ರತಿಷ್ಠೆ ಅಷ್ಟಬಂಧ ಬ್ರಹ್ಮಕಲಶೋತ್ಸವದ ಕೊನೆಯ ದಿನವಾದ ಮೇ 13ರಂದು ನಡೆದ ಧಾರ್ಮಿಕ ಸಭೆಯ ಅಧ್ಯಕ್ಷತೆಯನ್ನು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ.ವೀರೇಂದ್ರ ಹೆಗ್ಗಡೆಯವರು  ವಹಿಸಿದ್ದರು . ಶ್ರೀ ಧಾಮ ಮಾಣಿಲದ ಪರಮಪೂಜ್ಯ ಶ್ರೀ ಮೋಹನದಾಸ ಸ್ವಾಮೀಜಿ ಆಶೀರ್ವಚನ ನೀಡಿದರು
ಈ ಸಂದರ್ಭದಲ್ಲಿ ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಶಾಸಕ ಹರೀಶ್‌ಪೂಂಜ ಅವರನ್ನು ದೇವಸ್ಥಾನದ ವತಿಯಿಂದ ಡಾ. ಹೆಗ್ಗಡೆಯವರು ಗೌರವಿಸಿದರು. ಬ್ರಹ್ಮಕಲಶೋತ್ಸವ ಹಾಗೂ ಜೀರ್ಣೋದ್ಧಾರ ಸಮಿತಿಯ ಪದಾಧಿಕಾರಿಗಳನ್ನು ಅಭಿನಂದಿಸಲಾಯಿತು.
ವೇದಿಕೆಯಲ್ಲಿಶಾಸಕರು ಹಾಗೂ ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಹರೀಶ್ ಪೂಂಜ, ಆಡಳಿತ ಮೊಕ್ತೇಸರ ಎನ್. ಧನಂಜಯ ಅಜ್ರಿ ನಡಗುತ್ತು, ಬ್ರಹ್ಮಕಲಶೋತ್ಸವದ ಕಾರ್ಯಾಧ್ಯಕ್ಷ ಬಿ. ವಿಠಲ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಗಿರೀಶ್ ಡೋಂಗ್ರೆ, ಕೋಶಾಧಿಕಾರಿ ಸುಬ್ರಾಯ ಡೋಂಗ್ರೆ, ಜೀರ್ಣೋದ್ಧಾರ ಸಮಿತಿ ಕಾರ್ಯಾಧ್ಯಕ್ಷ ಭೂಷಣ್‌ ಕಡಂಬ, ಕೋಶಾಧಿಕಾರಿ ಯೋಗೀಶ್ ಆರ್.ಭಿಡೆ, ಬ್ರಹ್ಮಕಲಶೋತ್ಸವ ಸಮಿತಿ ಕಾರ್ಯದರ್ಶಿಗಳಾದ ವಸಂತ ಸುವರ್ಣ, ರಾಜೇಶ್ ಶೆಟ್ಟಿ, ಅಲೋಕ್ ಅಜ್ರಿ, ಪ್ರಕಾಶ್ ಶೆಟ್ಟಿ ಉಪಸ್ಥಿತರಿದ್ದರು.

Advt_NewsUnder_
Advt_NewsUnder_
Advt_NewsUnder_

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.