ಪ್ರಾಥಮಿಕ ಶಾಲಾ ಶಿಕ್ಷಕರ ತರಬೇತಿ ಕೋರ್ಸಿಗೆ ಪ್ರವೇಶ ಆರಂಭ

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಕರ ತರಬೇತಿ ಸಂಸ್ಥೆ (ಡಿ.ಇಡಿ) ಯಲ್ಲಿ 2019-20ನೇ ಸಾಲಿನ ಶಿಕ್ಷಕರ ತರಬೇತಿ ಕೋರ್ಸಿಗೆ ಪ್ರವೇಶ ಪ್ರಕ್ರಿಯೆ ಆರಂಭಗೊಂಡಿದ್ದು ಪಿ.ಯು.ಸಿ. ಪಾಸಾದ ಕಲಾ/ವಾಣಿಜ್ಯ ಮತ್ತು ವಿಜ್ಞಾನ ವಿಷಯಗಳಲ್ಲಿ ಶೇ.50 ಮತ್ತು ಎಸ್‌ಸಿ/ಎಸ್‌ಟಿ/ಪಿಎಚ್ ಶೇ.45 ಅಂಕಗಳನ್ನು ಪಡೆದಿರುವ ವಿದ್ಯಾರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಎಸ್‌ಸಿ ಮತ್ತು ಎಸ್‌ಟಿ ವಿದ್ಯಾರ್ಥಿಗಳಿಗೆ ಆದ್ಯತೆ ಮೇರೆಗೆ ಉಚಿತವಾಗಿ ಹಾಗೂ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಅತೀ ಕಡಿಮೆ ಶುಲ್ಕದಲ್ಲಿ ದಾಖಲಾತಿ ಮಾಡಿಕೊಳ್ಳಲಾಗುವುದು. 1 ರಿಂದ 8 ನೇ ತರಗತಿಗೆ ಪ್ರಾಥಮಿಕ ಶಾಲಾ ಶಿಕ್ಷಕರಾಗಲು ಬಯಸುವ ಪಿಯುಸಿ ಪಾಸಾದ ಆಸಕ್ತ ವಿದ್ಯಾರ್ಥಿಗಳು ಸಂಸ್ಥೆಯ ಕಚೇರಿಯನ್ನು ಸಂಪರ್ಕಿಸಬೇಕಾಗಿ ಪ್ರಾಂಶುಪಾಲರು ಪ್ರಕಟನೆಯಲ್ಲಿ ತಿಳಿಸಿರುತ್ತಾರೆ. ಫೋನ್: 08256-237100, 9739462106 

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.