ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನದಲ್ಲಿ  ದೇವರಬಿಂಬ ಪ್ರತಿಷ್ಠೆ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಉಜಿರೆ : ಶಿಲಾಮಯ ಗರ್ಭಗುಡಿ, ತೀರ್ಥಮಂಟಪ, ಸುತ್ತುಪೌಳಿ, ದೇವತಾ ಸಾನಿಧ್ಯಗಳ ಜೀರ್ಣೋದ್ಧಾರ ಕಾರ್ಯಗಳಿಂದ ನಿರ್ಮಾಣಗೊಂಡ ಬೆಳಾಲು ಗ್ರಾಮದ ಅನಂತೋಡಿ ಶ್ರೀ ಅನಂತ ಪದ್ಮನಾಭ ದೇವಸ್ಥಾನದಲ್ಲಿ ವೇದಮೂರ್ತಿ ಬ್ರಹ್ಮಶ್ರೀ ನೀಲೇಶ್ವರ ಆಲಂಬಾಡಿ ಪದ್ಮನಾಭ ತಂತ್ರಿಗಳ ನೇತೃತ್ವದಲ್ಲಿ ಧರ್ಮಸ್ಥಳ ಧರ್ಮಧಿಕಾರಿ ಡಾ| ಡಿ.ವೀರೇಂದ್ರ ಹೆಗ್ಗಡೆಯವರು ಮತ್ತು ಹೇಮಾವತಿ ಹೆಗ್ಗಡೆಯವರ ದಿವ್ಯಉಪಸ್ಥಿತಿಯಲ್ಲಿ ಮೇ. 16 ರಂದು ಪೂರ್ವಾಹ್ನ 11.09ರ ಕರ್ಕಾಟಕ ಲಗ್ನ ಸುಮುಹೂರ್ತದಲ್ಲಿ ಪೀಠ ಪ್ರತಿಷ್ಠೆ ಪೂರ್ವಕ ಶ್ರೀ ಅನಂತ ಪದ್ಮನಾಭ ದೇವರ ನೂತನ ಬಿಂಬ ಪ್ರತಿಷ್ಠೆ ನೆರೆದ ಸಹಸ್ರಾರು ಭಕ್ತಭಿಮಾನಿಗಳ ಸಮ್ಮುಖದಲ್ಲಿ ಸಂಪನ್ನಗೊಂಡಿತು.
ಬಿಂಬಕ್ಕೆ ಅಷ್ಠಬಂಧ ಕ್ರಯ, ಉಪ ಸಾನ್ನಿಧ್ಯಗಳ ಪ್ರತಿಷ್ಠೆ, ಗರ್ಭಗುಡಿಗೆ ಶಿಖರ ಪ್ರತಿಷ್ಠೆ, ಅಲಂಕಾರ ಮಹಾಪೂಜೆ, ಪಲ್ಲಪೂಜೆ ಹಾಗೂ ಸಾರ್ವಜನಿಕ ಅನ್ನಸಂತರ್ಪಣೆ ನಡೆಯಿತು.
ಧರ್ಮಸ್ಥಳದ ಡಾ| ಡಿ.ವೀರೇಂದ್ರ ಹೆಗ್ಗಡೆಯವರು ಮತ್ತು ಹೇಮಾವತಿ ಹೆಗ್ಗಡೆಯವರು ಅನ್ನಸಂತರ್ಪಣೆಯ ಸೇವಾಕರ್ತರಾಗಿ ಸಂಕಲ್ಪ ಹಾಗೂ ಕೃಷ್ಣಾರ್ಪಣ ನಡೆಸಿದ್ದರು.
ದೇವಸ್ಥಾನಕ್ಕೆ ಶಿವ ಶಂಕರ ಕುಡ್ವ ಸೇವಾರೂಪವಾಗಿ ವಿಶೇಷ ಪುಷ್ಪಾಲಂಕಾರಗಳಿಂದ ಶೃಂಗರಿಸಿದ್ದರು. ಚೆಂಡೆ, ವಾದ್ಯಮೇಳ, ಭಜನಾ ತಂಡಗಳು ವಿಶೇಷ ಆಕರ್ಷಣೆಯಾಗಿತ್ತು. ಊರ ಪರವೂರ ಭಕ್ತಾಧಿಗಳು ನೂತನ ಬಿಂಬ ಪ್ರತಿಷ್ಠೆ ಕಾರ್ಯದಲ್ಲಿ ಭಕ್ತಿ, ಶ್ರದ್ಧೆಯಿಂದ ಭಾಗವಹಿಸಿದ್ದರು.
ಧರ್ಮಸ್ಥಳದ ಅರ್ಚಕ ರಾಮಕೃಷ್ಣ ಕಲ್ಲೂರಾಯ, ಆಡಳಿತ ಮೊಕ್ತೇಸರ ಜೀವಂಧರ ಕುಮಾರ್ ಜೈನ್, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಶ್ರೀನಿವಾಸ ಗೌಡ, ಬ್ರಹ್ಮಕಲಶೋತ್ಸವ ಸಮಿತಿ ಕಾರ್ಯಾಧ್ಯಕ್ಷ ಜತ್ತಣ್ಣ ಗೌಡ, ಅಧ್ಯಕ್ಷ ಆನಂದ ಆಚಾರ್ಯ, ಜೀರ್ಣೋದ್ಧಾರ ಸಮಿತಿ ಕಾರ್ಯದರ್ಶಿ ಸತೀಶ ಗೌಡ, ಪ್ರಧಾನ ಕಾರ್ಯದರ್ಶಿ ದುರ್ಗಾಪ್ರಸಾದ್ ಕೆರ್ಮುಣ್ಣಾಯ, ಕಾರ್ಯಾಧ್ಯಕ್ಷ ತಿಮ್ಮಪ್ಪ ಗೌಡ, ಪ್ರಧಾನಕಾರ್ಯದರ್ಶಿ ಗಿರೀಶ ಬಾರಿತ್ತಾಯ ವಿವಿಧ ಸಮಿತಿ, ಉಪಸಮಿತಿ ಸದಸ್ಯರು ಭಾಗವಹಿಸಿದ್ದರು.
ಋತ್ವಿಜರಿಂದ ಚತುರ್ವೇದ ಪಾರಾಯಣ, ಶ್ರೀವಿಷ್ಣು ಸಹಸ್ರನಾಮ ಪಾರಾಯಣ ನಡೆಯಿತು.

Advt_NewsUnder_2
Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.