ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಧರ್ಮಸ್ಥಳಕ್ಕೆ ಭೇಟಿ

ಧರ್ಮಸ್ಥಳ: ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ರವರು ಮೇ.16 ರಂದು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ಶ್ರೀ ದೇವರ ದರ್ಶನ ಪಡೆದರು. ನಂತರ ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ.ವೀರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿ ಸಮಾಲೋಚನೆ ನಡೆಸಿದರು.
ಈ ಸಂದರ್ಭದಲ್ಲಿ ಹೆಗ್ಗಡೆಯವರು ಅವರಿಗೆ ಚಿನ್ನದ ನಾಣ್ಯವನ್ನು ನೀಡಿ ಗೌರವಿಸಿದರು. ಜೆಡಿಎಸ್ ಜಿಲ್ಲಾ ಘಟಕದ ಅಧ್ಯಕ್ಷ ಎಂ.ಬಿ ಸದಾಶಿವ, ಹೆಗ್ಗಡೆಯವರ ಆಪ್ತ ಕಾರ್ಯದರ್ಶಿ ಎ.ವೀರೂ ಶೆಟ್ಟಿ, ದೇವಸ್ಥಾನದ ಪಾರುಪತ್ಯಗಾರ ಲಕ್ಷ್ಮೀನಾರಾಯಣ ರಾವ್, ದೇವಸ್ಥಾನದ ಕಛೇರಿ ಪ್ರಬಂಧಕ ಪಾರ್ಶ್ವನಾಥ್ ಜೈನ್ ಮತ್ತಿತರರು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.