ಬೆಳಾಲು ಶ್ರೀ ಅನಂತ ಪದ್ಮನಾಭ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ: ಧಾರ್ಮಿಕ ಸಭೆ

Advt_NewsUnder_1
Advt_NewsUnder_1
Advt_NewsUnder_1

ಬೆಳಾಲು: ಇಲ್ಲಿಯ ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನದಲ್ಲಿ ಮೇ.11 ರಿಂದ ಪ್ರಾರಂಭಗೊಂಡ ನೂತನ ಬಿಂಬ ಪ್ರತಿಷ್ಠಾಷ್ಟಬಂಧ ಬ್ರಹ್ಮಕಲಶೋತ್ಸವ ಅಂಗವಾಗಿ ಮೇ.16 ರಂದು ಸಂಜೆ ಧಾರ್ಮಿಕ ಸಭಾಕಾರ್ಯಕ್ರಮ ಜರುಗಿತು.
ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ.ವೀರೇಂದ್ರ ಹೆಗ್ಗಡೆಯವರು ಧಾರ್ಮಿಕ ಸಭಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಉಡುಪಿ ಪೇಜಾವರ ಅಧೋಕ್ಷಜ ಮಠದ ಶ್ರೀ ವಿಶ್ವೇಶತೀರ್ಥ ಶ್ರೀಪಾದಂಗಳವರು ಹಾಗೂ ಮಾಣಿಲ ಶ್ರೀ ಧಾಮದ ಶ್ರೀ ಮೋಹನದಾಸ ಸ್ವಾಮೀಜಿಯವರು ಆಶೀರ್ವಚನ ನೀಡಿದರು.
ವೇದಿಕೆಯಲ್ಲಿ ಶಾಸಕ ಹರೀಶ್ ಪೂಂಜ, ದೇವಸ್ಥಾನದ ಆಡಳಿತ ಮೊಕ್ತೇಸರ ಜೀವಂಧರ ಕುಮಾರ್ ಜೈನ್, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಶ್ರೀನಿವಾಸ ಗೌಡ, ಬ್ರಹ್ಮಕಲಶೋತ್ಸವ ಸಮಿತಿ ಕಾರ್ಯಾಧ್ಯಕ್ಷ ಜತ್ತಣ್ಣ ಗೌಡ, ಅಧ್ಯಕ್ಷ ಆನಂದ ಆಚಾರ್ಯ, ಜೀರ್ಣೋದ್ಧಾರ ಸಮಿತಿ ಕಾರ್ಯದರ್ಶಿ ಸತೀಶ ಗೌಡ, ಪ್ರಧಾನ ಕಾರ್ಯದರ್ಶಿ ದುರ್ಗಾಪ್ರಸಾದ್ ಕೆರ್ಮುಣ್ಣಾಯ, ಕಾರ್ಯಾಧ್ಯಕ್ಷ ತಿಮ್ಮಪ್ಪ ಗೌಡ, ಪ್ರಧಾನಕಾರ್ಯದರ್ಶಿ ಗಿರೀಶ ಬಾರಿತ್ತಾಯ ಮತ್ತಿತರ ಗಣ್ಯರು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.