ಬಳಂಜ: ಬಿಲ್ಲವ ಸಂಘದ ನೂತನ ಕಛೇರಿ ಉದ್ಘಾಟನೆ

Advt_NewsUnder_1
Advt_NewsUnder_1
Advt_NewsUnder_1

ಬಳಂಜ: ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ , ಯುವ ಬಿಲ್ಲವ ವೇದಿಕೆ ಮತ್ತು ಮಹಿಳಾ ಬಿಲ್ಲವ ವೇದಿಕೆ ಬಳಂಜ-ನಾಲ್ಕೂರು-ತೆಂಕಕಾರಂದೂರು ಇದರ ನೂತನ ಕಛೇರಿಯ ಉದ್ಘಾಟನೆಯು ಮೇ.17 ರಂದು ಜರುಗಿತು.
ಮಾಜಿ ಶಾಸಕ, ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಗೌರವಾಧ್ಯಕ್ಷ ಕೆ.ವಸಂತ ಬಂಗೇರ ದೀಪ ಬೆಳಗಿಸಿ ಉದ್ಘಾಟಿಸಿ, ನೂತನ ಸಂಸ್ಥೆಗೆ ಶುಭ ಹಾರೈಸಿದರು. ಬ್ರಹ್ಮಶ್ರೀ ನಾರಾಯಣಗುರು ಸೇವಾ ಸಮಿತಿ ಬಳಂಜದ ಅಧ್ಯಕ್ಷ ಪ್ರವೀಣ್  ಕುಮಾರ್ ಹೆಚ್.ಎಸ್ ವಹಿಸಿದ್ದರು.
ಈ ಸಂದರ್ಭದಲ್ಲಿ ವೇದಿಕೆಯಲ್ಲಿ ಗೌರವ ಸಲಹೆಗಾರ ಕೆ ವಸಂತ ಸಾಲ್ಯಾನ್, ನಿವೃತ್ತ ಎಸ್.ಪಿ ಪೀತಾಂಬರ ಹೇರಾಜೆ, ಬೆಳ್ತಂಗಡಿ ಬಿಲ್ಲವ ಸಂಘದ ಮಾಜಿ ಅಧ್ಯಕ್ಷ ಗಂಗಾಧರ ಮಿತ್ತಮಾರ್ , ಭಗೀರಥ ಜಿ, ಯೋಗೀಶ್ ಕುಮಾರ್ ಕೆ.ಎಸ್, ಎಪಿಎಂಸಿ ನಿರ್ದೇಶಕ ಚಿದಾನಂದ ಪೂಜಾರಿ ಎಲ್ದಡ್ಕ , ಅಭಿನಂದನ್ ಹರೀಶ್ ಕುಮಾರ್ ,ಬೆಳ್ತಂಗಡಿ ಬಿಲ್ಲವ ಸಂಘದ ಮಾಜಿ ನಿರ್ದೇಶಕ ಸಂಜೀವ ಪೂಜಾರಿ ಕೊಡಂಗೆ, ಬಳಂಜ  ಬ್ರಹ್ಮಶ್ರೀ ನಾರಾಯಣಗುರು ಸೇವಾ ಸಮಿತಿ ಗೌರವಾಧ್ಯಕ್ಷ ಹೆಚ್ ಧರ್ಣಪ್ಪ ಪೂಜಾರಿ,  ಪ್ರಧಾನ ಕಾರ್ಯದರ್ಶಿ ಯೋಗೀಶ್ ಪೂಜಾರಿ, ಬಳಂಜ ಮಹಿಳಾ ಬಿಲ್ಲವ ವೇದಿಕೆ ಅಧ್ಯಕ್ಷೆ ಶ್ರೀಮತಿ ವಿನುಷಾ ಪ್ರಕಾಶ್,ಕಾರ್ಯದರ್ಶಿ ಕು| ಅನುಶ್ರೀ, ಬಳಂಜ ಯುವ ಬಿಲ್ಲವ ವೇದಿಕೆ ಅಧ್ಯಕ್ಷ ಜಗದೀಶ್ ಪೂಜಾರಿ, ಕಾರ್ಯದರ್ಶಿ ಪ್ರಶಾಂತ್ ಪೂಜಾರಿ ಉಪಸ್ಥಿತರಿದ್ದು, ಕಾರ್ಯಕ್ರಮದ ಯಶಸ್ವಿಗೆ ಸಹಕರಿಸಿದರು.
ಈ ಸಂದರ್ಭದಲ್ಲಿ ಈ ಬಾರಿಯ ಎಸ್ಸೆಸ್ಸೆಲ್ಸಿ ಹಾಗೂ ಪಿಯುಸಿ ಪರೀಕ್ಷೆಯಲ್ಲಿ ಉನ್ನತಶ್ರೇಣಿಯಲ್ಲಿ ತೇರ್ಗಡೆ ಹೊಂದಿದ ಸಮಾಜದ ವಿದ್ಯಾರ್ಥಿಗಳನ್ನು ಗುರುತಿಸಿ ಗೌರವಿಸಲಾಯಿತು.
ಬೆಳ್ತಂಗಡಿ ಸಂಘದ ನಿರ್ದೇಶಕ ಸಂತೋಷ್ ಪಿ ಕೊಟ್ಯಾನ್ ಸ್ವಾಗತಿಸಿ, ಸಂಘದ ಉಪಾಧ್ಯಕ್ಷ ಸದಾನಂದ ಸಾಲಿಯಾನ್ ನಿರೂಪಿಸಿ, ತಾಲೂಕು ಬಿಲ್ಲವ ವೇದಿಕೆ ಕಾರ್ಯದರ್ಶಿ ರಂಜಿತ್ ಹೆಚ್.ಡಿ ವಂದಿಸಿದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.