ಸರಕಾರಿ ಶಾಲೆಗಳಲ್ಲಿ ಆಂಗ್ಲ ಮಾಧ್ಯಮ ತರಗತಿ: ತಾಲೂಕಿನ ಆರು ಹಿರಿಯ ಪ್ರಾಥಮಿಕ ಶಾಲೆ ಆಯ್ಕೆ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಬೆಳ್ತಂಗಡಿ: ಪ್ರಸಕ್ತ ಶೈಕ್ಷಣಿಕ ವರ್ಷದಿಂದಲೇ ರಾಜ್ಯದ ಒಂದು ಸಾವಿರ ಸರಕಾರಿ ಶಾಲೆಗಳಲ್ಲಿ ಆಂಗ್ಲ ಮಾಧ್ಯಮ ತರಗತಿ ಆರಂಭಿಸಲು ರಾಜ್ಯ ಸರಕಾರ ನೀಡಿದ ಆದೇಶದನ್ವಯ ಬೆಳ್ತಂಗಡಿ ತಾಲೂಕಿನಲ್ಲಿ 6 ಪ್ರಾಥಮಿಕ ಶಾಲೆಗಳಲ್ಲಿ ಆಂಗ್ಲ ಮಾಧ್ಯಮದಲ್ಲಿ ತರಗತಿಗಳು ಆರಂಭಗೊಳ್ಳಲಿದೆ.
ತಾಲೂಕಿನ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಬೆಳ್ತಂಗಡಿ, ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಬಡಗಕಾರಂದೂರು, ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಅಂಡಿಂಜೆ, ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮಚ್ಚಿನ, ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ನಾವೂರು, ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಪುಂಜಾಲಕಟ್ಟೆ ಈ ವರ್ಷ ಆಂಗ್ಲ ಮಾಧ್ಯಮ ತರಗತಿಗಳು ಆರಂಭಕ್ಕೆ ಆಯ್ಕೆಗೊಂಡ ಶಾಲೆಗಳಾಗಿವೆ.
2018-19ನೇ ಸಾಲಿನ ಬಜೆಟ್‌ನಲ್ಲಿ ಘೋಷಣೆ ಮಾಡಿರುವಂತೆ ಗ್ರಾಮೀಣ ಭಾಗದಲ್ಲಿ ಬಡ ಮಕ್ಕಳಿಗೂ ಅಗತ್ಯ ಪೂರ್ವ ಪ್ರಾಥಮಿಕ ಶಿಕ್ಷಣ ದೊರೆಯಬೇಕು ಎಂಬ ಕಾರಣಕ್ಕೆ ರಾಜ್ಯ ಸರಕಾರ ಈ ಕ್ರಮ ಕೈಗೊಂಡಿದೆ. ಈಗಾಗಲೇ ರಾಜ್ಯದಲ್ಲಿ ಘೋಷಣೆ ಮಾಡಿರುವ ಗ್ರಾಮ ಪಂಚಾಯತ್‌ಗೆ ಒಂದರಂತೆ ಆರಂಭಿಸಲು ಉದ್ದೇಶಿಸಿರುವ ಸರಕಾರಿ ಕರ್ನಾಟಕ ಪಬ್ಲೀಕ್ ಶಾಲೆಗಳಲ್ಲಿಯೇ ಪೂರ್ವ ಪ್ರಾಥಮಿಕ (ಎಲ್‌ಕೆಜಿ-ಯುಕೆಜಿ) ತರಗತಿಗಳನ್ನು ಆರಂಭಿಸಬೇಕು, ಪ್ರತಿ ವಿಧಾನ ಸಭಾ ಕ್ಷೇತ್ರದಲ್ಲಿ ನಾಲ್ಕು ಶಾಲೆಗಳಾದರೂ ಆರಂಭಿಸಬೇಕು, ಇದರಲ್ಲಿ ಒಂದು ಶಾಲೆ ವಿಧಾನ ಸಭಾ ಕ್ಷೇತ್ರದ ಕೇಂದ್ರ ಸ್ಥಾನದಲ್ಲಿರಬೇಕು. 1ರಿಂದ 10ನೇ ತರಗತಿವರೆಗೆ ಒಂದೇ ಆವರಣದಲ್ಲಿ ನಡೆಯುತ್ತಿರುವ ಶಾಲೆಗಳಿಗೆ ಮೊದಲ ಆದ್ಯತೆ ನೀಡಬೇಕು ಎಂದು ಸೂಚನೆ ನೀಡಿದೆ.
ಈಗಾಗಲೇ ರಾಜ್ಯ ಸರಕಾರ ಖಾಸಗಿ ಶಾಲೆಗಳ ಹಾವಳಿ ತಡೆಗಟ್ಟಿ ಸರಕಾರಿ ಶಾಲೆಗಳಲ್ಲಿಯೇ ಗುಣಮಟ್ಟದ ಶಿಕ್ಷಣ ನೀಡಲು ಆಡಳಿತಾತ್ಮಕ ದೃಷ್ಟಿಯಿಂದ ಪೂರ್ವ ಪ್ರಾಥಮಿಕ ಶಾಲೆಗಳಲ್ಲಿ ಈ ಶೈಕ್ಷಣಿಕ ವರ್ಷದಿಂದಲೇ ತರಗತಿ ಆರಭಿಸಲು ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ನಿರ್ಧರಿಸಲಾಗಿತ್ತು.

1ನೇ ತರಗತಿಗೆ ಆಂಗ್ಲ ಮಾಧ್ಯಮ
1ನೇ ತರಗತಿಗೆ ಮಾತ್ರ ಆಂಗ್ಲ ಮಾಧ್ಯಮ ಆರಂಭಿಸಿ ಮುಂದಿನ 10 ವರ್ಷಗಳಲ್ಲಿ ಮುಂದಿನ ತರಗತಿಗೆ ವಿಸ್ತರಿಸುವುದು. ಸಾವಿರ ಆಂಗ್ಲ ಮಾಧ್ಯಮ ವಿಭಾಗಗಳಲ್ಲಿ ಇಂಗ್ಲೀಷ್ ಮತ್ತು ಗಣಿತ ವಿಷಯಗಳಿಗೆ ಕೇಂದ್ರ ಪಠ್ಯಕ್ರಮ(ಎನ್‌ಸಿಇಆರ್‌ಟಿ) ಹಾಗೂ ಪರಿಸರ ಅಧ್ಯಯನ ಮತ್ತು ಕನ್ನಡ ವಿಷಯಗಳಿಗೆ (ಡಿಎಸ್‌ಇಆರ್‌ಟಿ) ಪುಸ್ತಕಗಳನ್ನು ಅನುಸರಿಸಬೇಕು ಎಂದು ಸೂಚಿಸಲಾಗಿದೆ.

Advt_NewsUnder_2
Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.