ಸರಕಾರಿ ನೌಕರರು, ಕುಟುಂಬದವರಿಗೆ ಹೆಚ್ಚಿನ ಆರೋಗ್ಯ ಸೇವೆ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಆಯುಷ್ಮಾನ್‌ಗೆ ಜ್ಯೋತಿ ಸಂಜೀವಿನಿ ವಿಲೀನ

ಬೆಳ್ತಂಗಡಿ: ರಾಜ್ಯ ಸರಕಾರಿ ನೌಕರರು ಮತ್ತು ಕುಟುಂಬದವರಿಗೆ ಹೆಚ್ಚುವರಿ ಚಿಕಿತ್ಸೆ ದೊರೆಯಲು ಅನುಕೂಲವಾಗುವಂತೆ ಜ್ಯೋತಿ ಸಂಜೀವಿನಿ ಯೋಜನೆಯನ್ನು `ಆಯುಷ್ಮಾನ್ ಭಾರತ್’ ಯೋಜನೆಯಡಿ ಸಂಯೋಜಿಸಿ ರಾಜ್ಯ ಆರೋಗ್ಯ ಇಲಾಖೆ ಆದೇಶ ಹೊರಡಿಸಿದೆ.
ಗಂಭೀರ ಹಾಗೂ ಮಾರಣಾಂತಿಕ ಕಾಯಿಲೆಗಳಿಗೆ ಒಳಗಾಗುವ ರಾಜ್ಯ ಸರಕಾರಿ ನೌಕರರು ಹಾಗೂ ಅವರ ಕುಟುಂಬ ಸದಸ್ಯರಿಗೆ ನೋಂದಾಯಿತಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳಲ್ಲಿ ನಗದು ರಹಿತ ತೃತೀಯ ಹಂತದ ಆರೋಗ್ಯ ಸೇವೆಯು ಇದರಡಿ ಲಭಿಸಲಿದೆ.
2018ರ ಮಾ.2 ರಂದು ರಾಜ್ಯದಲ್ಲಿ ಆರೋಗ್ಯ ಕರ್ನಾಟಕ ಅನುಷ್ಠಾನಗೊಂಡಿದ್ದು,2018 ರ ನವಂಬರ್ 15 ರಂದು ಕೇಂದ್ರ ಸರಕಾರ ಆಯುಷ್ಮಾನ್ ಭಾರತ್ ಯೋಜನೆಯೊಂದಿಗೆ ಆರೋಗ್ಯ ಕರ್ನಾಟಕ ಯೋಜನೆ ವಿಲೀನಗೊಂಡು ಆಯುಷ್ಮಾನ್ ಭಾರತ್-ಆರೋಗ್ಯ ಕರ್ನಾಟಕ ಯೋಜನೆಯಗಿ ಬದಲಾಗಿದೆ. ಈ ಯೋಜನೆಯಲ್ಲಿ 1614 ಪ್ರಥಮ ಹಾಗೂ ದ್ವಿತೀಯ ಹಂತದ ಚಿಕಿತ್ಸಾ ವಿಧಾನ, 900 ತೃತೀಯ ಹಂತದ ಚಿಕಿತ್ಸಾ ವಿಧಾನ, 169 ತುರ್ತು ಚಿಕಿತ್ಸಾ ವಿಧಾನ ಲಭ್ಯವಿದೆ.
ನೌಕರರ ಅವಲಂಬಿತ ಕುಟುಂಬದ ಸದಸ್ಯರು( ನೌಕರರ ಪತಿ ಅಥವಾ ಪತ್ನಿ ತಂದೆ ಮತ್ತು ತಾಯಿ, ಮಲತಾಯಿ, ಮಕ್ಕಳು, ದತ್ತು ಮಕ್ಕಳು, ಮಲಮಕ್ಕಳು) ಸೌಲಭ್ಯ ಪಡೆಯಬಹುದಾಗಿದೆ. ಗಂಭೀರವಾದ 7 ಚಿಕಿತ್ಸೆಗಳಿಗೂ ಪ್ರತ್ಯೇಕ ಪ್ಯಾಕೇಜ್‌ದರಗಳನ್ನು ಸರಕಾರ ನಿಗದಿಪಡಿಸಿದ್ದು, ನೋಂದಾಯಿತ ಆಸ್ಪತ್ರೆಗಳಲ್ಲಿ ನಗದು ರಹಿತ ಚಿಕಿತ್ಸೆ ದೊರೆಯಲಿದೆ. ಪ್ಯಾಕೇಜ್‌ನಲ್ಲಿ ಸಮಾಲೋಚನೆ, ತಪಾಸಣೆ, ಚಿಕಿತ್ಸಾ ವೆಚ್ಚ, ಆಹಾರ, ಆಸ್ಪತ್ರೆಯ ವೆಚ್ಚ, ಜೌಷಧಗಳು ಮತ್ತು ನಂತರದ ಸೇವೆಗಳು 10 ದಿನಗಳವರೆಗೆ ಒಳಗೊಂಡಿರುತ್ತದೆ ಯೋಜನೆ ಅನುಷ್ಠಾನದ ಕುರಿತು ಶೀಘ್ರವೇ ನಿಯಮಗಳನ್ನು ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ಪ್ರಕಟಿಸಲಿದೆ.

ಈವರೆಗೂ ಜ್ಯೋತಿ ಸಂಜೀವಿನಿ ಯೋಜನೆಯಡಿ ಹೃದ್ರೋಗ, ಕ್ಯಾನ್ಸರ್, ನರರೋಗ, ಮೂತ್ರಪಿಂಡದ ಕಾಯಿಲೆ, ಸುಟ್ಟಗಾಯ, ಗಂಭೀರ ಸ್ವರೂಪದ ಅಪಘಾತ ಮತ್ತು ಚಿಕ್ಕಮಕ್ಕಳ ಕಾಯಿಲೆ ಸೇರಿದಂತೆ ಒಟ್ಟು 7 ಬಗೆಯ ಮಾರಣಾಂತಿಕ ಕಾಯಿಲೆಗಳಿಗೆ ಸಂಬಂಧಿಸಿದಂತೆ 450  ಚಿಕಿತ್ಸಾ ವಿಧಾನ ಹಾಗೂ 50 ಮುಂದುವರಿದ ಚಿಕಿತ್ಸಾ ಸೌಲಭ್ಯಗಳು ನಗದು ರಹಿತವಾಗಿ ದೊರೆಯುತ್ತಿತ್ತು. ಇದೀಗ ಈ ಸೌಲಭ್ಯ ಹೆಚ್ಚಿದ್ದು, ಮುಂದಿನ ದಿನಗಳಲ್ಲಿ 900 ತೃತೀಯ ಹಂತದ ಚಿಕಿತ್ಸಾ ವಿಧಾನಗಳು ಹಾಗೂ 169 ತುರ್ತು ಚಿಕಿತ್ಸಾ ವಿಧಾನಗಳನ್ನು ಜ್ಯೋತಿ ಸಂಜೀವಿನಿ ಯೋಜನೆಯಡಿ ಲಭ್ಯವಾಗಲಿದೆ.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.