ಸಂಸದ ನಳಿನ್ ಕುಮಾರ್ ಕಟೀಲ್ ಧರ್ಮಸ್ಥಳ ಭೇಟಿ

ಧರ್ಮಸ್ಥಳ: ಸಂಸದ ನಳಿನ್ ಕುಮಾರ್ ಕಟೀಲ್ ಮೇ.24 ರಂದು ಧರ್ಮಸ್ಥಳಕ್ಕೆ ಭೇಟಿ  ನೀಡಿ ಶ್ರೀದೇವರ ದರ್ಶನ ಪಡೆದರು. ನಂತರ ಧರ್ಮಸ್ಥಳದ  ಧರ್ಮಾಧಿಕಾರಿ ಡಾ|  ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು. ಹೆಗ್ಗಡೆಯವರು ಸಂಸದರನ್ನು ಅಭಿನಂದಿಸಿ ಶುಭ ಹಾರೈಸಿದರು.

ನಂತರ  ಕನ್ಯಾಡಿ ಶ್ರೀರಾಮ ಕ್ಷೇತ್ರಕ್ಕೆ ಭೇಟಿ ನೀಡಿ ಕ್ಷೇತ್ರದ ಗುರುವರ್ಯರಾದ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಆಶೀರ್ವಾದ ಪಡೆದರು.

ಬೆಳ್ತಂಗಡಿ ಶಾಸಕ ಹರೀಶ್ ಪೂಂಜ, ಪುತ್ತೂರು ಶಾಸಕ ಸಂಜೀವ ಮಠಂದೂರು, ಬೆಳ್ತಂಗಡಿ ಬಿಜೆಪಿ ಮಂಡಲ ಅಧ್ಯಕ್ಷ  ಜಯಂತ್ ಕೋಟ್ಯಾನ್, ಬಿಜೆಪಿ ಮಂಡಲ ಪ್ರಧಾನ ಕಾರ್ಯದರ್ಶಿ ಸೀತಾರಾಮ ಬೆಳಾಲು,  ಮತ್ತು ಪಕ್ಷದ ಕಾರ್ಯಕರ್ತರು ಜೊತೆಗಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.