ಅಂಡಿಂಜೆ ಶಾಲಾ ಪ್ರಾರಂಭೋತ್ಸವ ಆಚರಣೆ

ವೇಣೂರು: ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆ ಅಂಡಿಂಜೆಯಲ್ಲಿ ಪ್ರಸಕ್ತ ಶೈಕ್ಷಣಿಕ ಸಾಲಿನ ಶಾಲಾ ಪ್ರಾರಂಭೋತ್ಸವ ಜರಗಿತು.
ಶಾಲೆಯನ್ನು ತೋರಣಗಳಿಂದ ಅಲಂಕರಿಸಿ, ನೂತನವಾಗಿ ಸೇರ್ಪಡೆಗೊಂಡ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಲಾಯಿತು. ಅಂಡಿಂಜೆ ಗ್ರಾ.ಪಂ. ಅಧ್ಯಕ್ಷ ಮೋಹನ ಅಂಡಿಂಜೆ, ಶಾಲೆಯ ಮುಖ್ಯ ಶಿಕ್ಷಕ ಗುರುಮೂರ್ತಿ, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ರಮೇಶ್ ಕುಮಾರ್ ಭಟ್, ಜಿಲ್ಲಾ ಪ್ರಾಥಮಿಕ ಶಿಕ್ಷಕರ ಸಂಘದ ಅಧ್ಯಕ್ಷ ಕೆ. ಶಿವಶಂಕರ ಭಟ್, ಶಿಕ್ಷಕ ವೃಂದ ಹಾಗೂ ಪೋಷಕರು ಉಪಸ್ಥಿತರಿದ್ದರು. ಹಿರಿಯ ಶಿಕ್ಷಕಿ ಪ್ರೇಮಾ ಕೆ. ಸ್ವಾಗತಿಸಿ, ಪ್ರಾಸ್ತಾವಿಸಿದರು. ಶಿಕ್ಷಕಿ ನಳಿನಿ ವಂದಿಸಿದರು. ದೈಹಿಕ ಶಿಕ್ಷಣ ಶಿಕ್ಷಕ ವಿಜಯ ಕುಮಾರ್ ನಿರೂಪಿಸಿದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.