ಅಳದಂಗಡಿ ತೋಟಗಾರಿಕಾ ರೈತ ಉತ್ಪಾದಕರ ಕಂಪೆನಿ ಉದ್ಘಾಟನೆ

ಬೆಳ್ತಂಗಡಿ: ಅಳದಂಗಡಿ ತೋಟಗಾರಿಕಾ ರೈತ ಉತ್ಪಾದಕರ ಕಂಪೆನಿ ಇದರ ಸಂಸ್ಥೆಯ ಉದ್ಘಾಟನಾ ಸಮಾರಂಭವು ಇಂದು(ಜೂ.1) ಬೆಳ್ತಂಗಡಿ ಮಿನಿವಿಧಾನ ಸೌಧದ ಸಮೀಪ ಇರುವ ವಿಘ್ನೇಶ್ ಸಿಟಿ ಸಭಾಂಗಣದಲ್ಲಿ ಜರುಗಿತು.
ನೂತನ ಸಂಸ್ಥೆಯ ಉದ್ಘಾಟನೆಯನ್ನು ಮಾಜಿ ಶಾಸಕ ವಸಂತ ಬಂಗೇರ ನೆರವೇರಿಸಿ, ಶುಭ ಹಾರೈಸಿದರು. ಅಳದಂಗಡಿ ತೋಟಗಾರಿಕಾ ರೈತ ಉತ್ಪಾದಕರ ಕಂಪೆನಿ ಅಧ್ಯಕ್ಷ ಹರಿದಾಸ್ ಎಸ್.ಎಂ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಮುಖ್ಯ ಅತಿಥಿಗಳಾಗಿ ಜಿ.ಪಂ ಸದಸ್ಯರಾದ ಶೇಖರ್ ಕುಕ್ಕೇಡಿ, ಧರಣೇಂದ್ರ ಕುಮಾರ್, ತಾ.ಪಂ ಸದಸ್ಯರಾದ ವಿನುಷಾ ಪ್ರಕಾಶ್, ಜಯಶೀಲಾ, ಪ್ರಾಥಮಿಕ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ ಅಧ್ಯಕ್ಷ ಪ್ರವೀಣ್ಚಂದ್ರ, ಕಲ್ಲೇರಿ ನವಚೇತನ ತೊಟಗಾರಿಕಾ ರೈತ ಉತ್ಪಾದಕರ ಕಂಪೆನಿ ಅಧ್ಯಕ್ಷ ದುಗ್ಗಪ್ಪ ಗೌಡ, ಬೆಳ್ತಂಗಡಿ ಎ.ಪಿ.ಎಂ.ಸಿ ಅಧ್ಯಕ್ಷ ಕೇಶವ ಪಿ ಬೆಳಾಲು, ಸುಲ್ಕೇರಿ ಗ್ರಾ.ಪಂ ಅಧ್ಯಕ್ಷೆ ಯಶೋಧಾ, ಶಿರ್ಲಾಲು ಗ್ರಾ.ಪಂ ಅಧ್ಯಕ್ಷೆ ಶಶಿಕಲಾ, ತೋಟಗಾರಿಕಾ ಇಲಾಖೆಯ ಹಿರಿಯ ಸಹಾಯಕ ನಿರ್ದ್ಯೆಶಕ ಶಿವಪ್ರಕಾಶ್, ಸಹಾಯಕ ಕೃಷಿ ನಿರ್ದೇಶಕಿ ಪ್ರೇಮಾ ಡಿ ಕಾಂಬ್ಳಿ ಉಪಸ್ಥಿತರಿದ್ದರು.
ಅಳದಂಗಡಿ ತೋಟಗಾರಿಕಾ ರೈತ ಉತ್ಪಾದಕರ ಕಂಪೆನಿ ಉಪಾಧ್ಯಕ್ಷ ಶಿವಾನಂದ ಹೆಗ್ಡೆ, ನಿರ್ದೇಶಕರಾದ ಪಿ.ರಾಮಕೃಷ್ಣ ಶಾಸ್ತ್ರಿ, ಚಾಮರಾಜ ಸೇಮಿತ, ದಿನೇಶ್ ಶೆಟ್ಟಿ, ಆನಂದ ಸಾಲಿಯಾನ್, ಸುಜಿತ್‌ರಾವ್ ಮತ್ತಿತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದು, ಕಾರ್ಯಕ್ರಮದ ಯಶಸ್ವಿಗೆ ಸಹಕರಿಸಿದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.