HomePage_Banner_
HomePage_Banner_
HomePage_Banner_
HomePage_Banner_
HomePage_Banner_
HomePage_Banner_

ಪೆರಿಂಜೆ  : ಪಡ್ಡ್ಯಾರಬೆಟ್ಟದಿಂದ ಉಚಿತ ಪುಸ್ತಕ ವಿತರಣೆ

ವೇಣೂರು: ಪೆರಿಂಜೆ ಸ.ಹಿ.ಪ್ರಾ. ಶಾಲೆಯಲ್ಲಿ ಶ್ರೀ ಕ್ಷೇತ್ರ ಪಡ್ಡ್ಯಾರಬೆಟ್ಟದ ವತಿಯಿಂದ ವಿದ್ಯಾರ್ಥಿಗಳಿಗೆ ಉಚಿತವಾಗಿ ನೀಡಲಾದ ಬರವಣಿಗೆ ಪುಸ್ತಕರ ವಿತರಣೆ ಕಾರ್ಯಕ್ರಮ ಜರಗಿತು.
ಪಡ್ಡ್ಯಾರಬೆಟ್ಟ ಕ್ಷೇತ್ರದ ಅನುವಂಶೀಯ ಆಡಳಿತದಾರರಾದ ಎ. ಜೀವಂಧರ ಕುಮಾರ್ ಅವರು ವಿದ್ಯಾರ್ಥಿಗಳಿಗೆ ಪುಸ್ತಕ ವಿತರಿಸಿ, ಶಾಲಾ ಶಿಕ್ಷಣವು ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಪೂರಕವಾಗಿದೆ. ಪೋಷಕರು ತಮ್ಮ ಕಲಿಕೆಗೆ ಪೂರಕ ವಾತಾವರಣ ನಿರ್ಮಿಸಬೇಕು. ವಿದ್ಯಾರ್ಥಿಗಳಿಗೆ ಸಂಸ್ಕಾರಯುತ ಶಿಕ್ಷಣ ನೀಡುವುದು ಶಿಕ್ಷಕರ ಹಾಗೂ ಪೋಷಕರ ಜವಾಬ್ದಾರಿ ಎಂದರು.
ಹೊಸಂಗಡಿ ಗ್ರಾ.ಪಂ. ಅಧ್ಯಕ್ಷೆ ಹೇಮಾವಸಂತ್ ಅಧ್ಯಕ್ಷತೆ ವಹಿಸಿದ್ದರು. ಉದ್ಯಮಿ ವಿಶ್ವಾಸ್ ಜೈನ್ ಪಡ್ಡ್ಯಾರಬೆಟ್ಟ, ಹೊಸಂಗಡಿ ಗ್ರಾ.ಪಂ. ಸದಸ್ಯ ಹರಿಪ್ರಸಾದ್ ಪಿ., ಮಾಜಿ ಅಧ್ಯಕ್ಷ ವಿದ್ಯಾನಂದ ಜೈನ್ ಎರ್ಮೋಡಿ, ಶಾಲಾ ಎಸ್‌ಡಿಎಂಸಿ ಅಧ್ಯಕ್ಷ ಆನಂದ ಬಂಗೇರ ಕೋಡಿಂಗೇರಿ, ಮಾಜಿ ಅಧ್ಯಕ್ಷ ಹೆಚ್. ಆಲಿಯಬ್ಬ, ಶಾಲೆಯ ಮುಖ್ಯಶಿಕ್ಷಕಿ ವಸಂತಿ ಕೆ. ಉಪಸ್ಥಿತರಿದ್ದರು.
ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಸದಸ್ಯರು, ಶಿಕ್ಷಕ ವೃಂದ ಹಾಗೂ ಮಕ್ಕಳ ಪೋಷಕರು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.