ನಾಳದಲ್ಲಿ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ

Advt_NewsUnder_1
Advt_NewsUnder_1

ಗೇರುಕಟ್ಟೆ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃಧ್ಧಿ ಯೋಜನೆ ಕಳಿಯ-ನ್ಯಾಯತರ್ಪು , ಸಾಮೂಹಿಕ ಶ್ರೀ ಸತ್ಯ ನಾರಾಯಣ ಪೂಜಾ ಸಮಿತಿ, ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟ, ಕಳಿಯ/ನ್ಯಾಯತರ್ಪು ಇದರ ಸಂಯುಕ್ತ ಆಶ್ರಯದಲ್ಲಿ 36 ನೇ ವರ್ಷದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜಾ ಕಾರ್ಯಕ್ರಮವು ಮೇ.31 ರಂದು ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಸನ್ನಿಧಿಯಲ್ಲಿ ಜರುಗಿತು.

ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಪ್ರಧಾನ ಅರ್ಚಕ ವೇ.ಮೂ.ರಾಘವೇಂದ್ರ ಆಸ್ರಣ್ಣರವರ ನೇತೃತ್ವದಲ್ಲಿ ಧಾರ್ಮಿಕ ವಿಧಿವತ್ತಾಗಿ ಜರಗಿತು. ಈ ಸಂದರ್ಭದಲ್ಲಿ ನಾಳ ದುರ್ಗಾಪರಮೇಶ್ವರಿ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ, ಪದಾಧಿಕಾರಿಗಳು, ಅಭಿವೃದ್ಧಿ ಸಮಿತಿ ಅಧ್ಯಕ್ಷ ಸದಸ್ಯರು, ಭಜನಾ ಮಂಡಳಿ ಸದಸ್ಯರು, ಶ್ರೀ ಸತ್ಯನಾರಾಯಣ ಪೂಜಾ ಸಮಿತಿ ಅಧ್ಯಕ್ಷ ಯಾದವ ಗೌಡ ಮುದುಂಜ, ಉಪಾಧ್ಯಕ್ಷೆ ವಿಜಯ ಹೆಚ್.ಪ್ರಸಾದ್, ಕೋಶಾಧಿಕಾರಿ ರಾಜೇಶ್ ಪೆಂರ್ಬುಡ, ಸೇವಾ ಪ್ರತಿನಿದಿ ವಿನೋದ, ಕು.ನಳಿನಿ, ಪ್ರಗತಿಬಂಧು ಸ್ವ-ಸಹಾಯ ಸಂಘದ ಅಧ್ಯಕ್ಷರು, ಸರ್ವಸದಸ್ಯರು ಉಪಸ್ಥಿತರಿದ್ದು ಕಾರ್ಯಕ್ರಮದ ಯಶಸ್ವಿಗೆ ಸಹಕರಿಸಿದರು. ನಡೆಯಿತು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.