ನೆಲ್ಯಾಡಿ-ವಿಶ್ವ ಪರಿಸರ ದಿನಾಚರಣೆ

ನೆಲ್ಯಾಡಿ ಸಂತ ಜಾರ್ಜ್ ಪದವಿ ಪೂರ್ವ ಕಾಲೇಜಿನ ಎನ್ನೆಸ್ಸೆಸ್ ಘಟಕದ ವತಿಯಿಂದ ಕಾಲೇಜು ಅವರಣದಲ್ಲಿ ವಿಶ್ವ ಪರಿಸರ ದಿನವನ್ನು ಗಿಡ ನೆಡುವ ಮೂಲಕ ಅಚರಿಸಲಾಯಿತು. ನೆಲ್ಯಾಡಿ ಸಂತ ಜಾರ್ಜ್ ವಿದ್ಯಾ ಸಂಸ್ಥೆಗಳ ಸಂಚಾಲಕರಾದ ಅಬ್ರಹಾಂ ವರ್ಗೀಸ್ ರವರು ಗಿಡ ನೆಟ್ಟು ಕಾರ್ಯಕ್ರಮವನ್ನು ಉದ್ಘಾಟಿಸಿದರು. ನಿವೃತ್ತ ಕನ್ನಡ ಪಂಡಿತರಾದ ವಿ.ಆರ್.ಹೆಗ್ಡೆಯವರು ವಿದ್ಯಾರ್ಥಿಗಳಿಗೆ ನೀರಿನ ಮಹತ್ವವನ್ನು ಮತ್ತು ಮಳೆಗಾಲದಲ್ಲಿ ನೀರಿಂಗಿಸುವ ವಿಧಾನಗಳನ್ನು ತಿಳಿಸಿಕೊಟ್ಟರು. ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಏಲಿಯಾಸ್ ಎಂ.ಕೆ, ಆಂಗ್ಲಮಾಧ್ಯಮ ವಿಭಾಗದ ಮುಖ್ಯಸ್ಥರಾದ ಹರಿಪ್ರಸಾದ್, ಎನ್ನೆಸ್ಸೆಸ್ ಕಾರ್ಯಕ್ರಮಾಧಿಕಾರಿ ವಿಶ್ವನಾಥ ಶೆಟ್ಟಿ, ಸ್ಕೌಟ್ ಮಾಸ್ಟರ್ ತೋಮಸ್ ಎಂ.ಐ., ಎನ್ನೆಸ್ಸೆಸ್ ಸ್ವಯಂಸೇವಕರು, ವಿದ್ಯಾರ್ಥಿವೃಂದ, ಇಕೋಕ್ಲಬ್ ಸದಸ್ಯರು, ಸ್ಕೌಟ್ ಗೈಡ್ ವಿದ್ಯಾರ್ಥಿಗಳು ಹಾಗೂ ಅಧ್ಯಾಪಕ ಮತ್ತು ಉಪನ್ಯಾಸಕ ವೃಂದ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.