ಅಕ್ರಮ ಗೋ ಸಾಗಾಟದ ಕಾರು ಪಲ್ಟಿ: 6 ಗೋವುಗಳ ದಾರುಣ ಸಾವು, ಗೋ ಕಳ್ಳರು ಪರಾರಿ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಮುಂಡಾಜೆ: ಚಾರ್ಮಾಡಿ ಕಡೆಯಿಂದ ಉಜಿರೆ ಕಡೆಗೆ ಅಕ್ರಮವಾಗಿ ಗೋಸಾಗಾಟ ಮಾಡುತಿದ್ದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿ ಕಮರಿಗೆ ಉರುಳಿ ಬಿದ್ದು, ಕಾರಿನಲ್ಲಿದ್ದ 6 ಹಸುಗಳು ದಾರುಣವಾಗಿ ಸಾವನ್ನಪ್ಪಿದ ಘಟನೆ ಜೂ.7 ರಂದು ಮುಂಜಾನೆ ನಡೆದಿದೆ.
ಬೆಂಗಳೂರು ನೊಂದಣಿಯ KA05MQ4824 ನಂಬ್ರದ ಇಕೋಸ್ಪೋರ್ಟ್ ಕಾರಿನಲ್ಲಿ ಅಕ್ರಮವಾಗಿ 6 ದನಗಳನ್ನು ತುಂಬಿಸಿಕೊಂಡು ಬರುತ್ತಿದ್ದ ವೇಳೆ ಮುಂಡಾಜೆ ಸೇತುವೆ ಬಳಿ ಕಾರು ಕಮರಿಗೆ ಉರುಳಿದ್ದು, ಗೋಕಳ್ಳರು ಗಾಡಿಯನ್ನು ಅಲ್ಲೇ ಬಿಟ್ಟು ಪರಾರಿಯಾಗಿದ್ದಾರೆ. ಕಾರಿನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಗೋವುಗಳಿಗೆ ಪ್ರಜ್ಞೆ ತಪ್ಪಿಸಿವ ಸಲುವಾಗಿ ಬ್ರೆಡ್‌ನಲ್ಲಿ ವಿಷಕಾರಿ ವಸ್ತುಗಳನ್ನು ತಿನ್ನಿಸಿರುವ ಶಂಕೆ ಮೂಡುತಿದ್ದು, ಕಾರಿನಲ್ಲಿ ಬ್ರೆಡ್ ಪ್ಯಾಕೇಟ್ ಪತ್ತೆಯಾಗಿದೆ. ಈ ಸಂಬಂಧ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

 

Advt_NewsUnder_2
Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.