HomePage_Banner_
HomePage_Banner_
HomePage_Banner_

ಆರಂಬೋಡಿ ಶಾಲೆ: ಉಚಿತ ಪಠ್ಯಪುಸ್ತಕ ವಿತರಣೆ

Advt_NewsUnder_1

ವೇಣೂರು: ಆರಂಬೋಡಿ ಸ.ಹಿ.ಪ್ರಾ. ಶಾಲೆಯಲ್ಲಿ ಸರಕಾರದಿಂದ ಒದಗಿಲಾದ ಉಚಿತ ಪಠ್ಯ ಪುಸ್ತಕ ವಿತರಣೆ ಕಾರ್ಯಕ್ರಮ ಜರಗಿತು.
ಶಾಲೆಯ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ, ಮೂಡಬಿದಿರೆ ಆಳ್ವಾಸ್ ಕಾಲೇಜಿನ ಉಪನ್ಯಾಸಕ ಡಾ| ಯೋಗೀಶ್ ಕೈರೋಡಿ ಅವರು ವಿದ್ಯಾರ್ಥಿಗಳಿಗೆ ಪಠ್ಯಪುಸ್ತಕವನ್ನು ವಿತರಿಸಿ, ಶುಭ ಹಾರೈಸಿದರು. ಶಾಲೆಗೆ ಹೊಸದಾಗಿ ದಾಖಲಾದ ಮಕ್ಕಳಿಗೆ ಹೂವನ್ನು ನೀಡಿ ಸ್ವಾಗತಿಸಲಾಯಿತು. ಶಾಲೆಯ ಎಸ್‌ಡಿಎಂಸಿ ಅಧ್ಯಕ್ಷೆ ಯಶವಂತಿ, ಹಳೆ ವಿದ್ಯಾರ್ಥಿ ಸಂಘದ ಕಾರ್ಯದರ್ಶಿ ಉಮೇಶ್ ಪಾಲ್ಯ, ಶಿಕ್ಷಕ ವೃಂದ, ಎಸ್‌ಡಿಎಂಸಿ ಸದಸ್ಯರು, ಪೋಷಕರು ಉಪಸ್ಥಿತರಿದ್ದರು. ಶಿಕ್ಷಕ ವಿಶ್ವನಾಥ ಕಾರ್ಯಕ್ರಮ ನಿರ್ವಹಿಸಿದರು.

Advt_NewsUnder_2
Advt_NewsUnder_2
Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.