ವೇಣೂರು: ಇಲ್ಲಿಯ ನವಚೇತನ ಆಂಗ್ಲಮಾಧ್ಯಮ ಹಿ.ಪ್ರಾ. ಶಾಲೆಯಲ್ಲಿ ವೇಣೂರು ಅರಣ್ಯ ಇಲಾಖೆಯ ಸಹಕಾರದಲ್ಲಿ ಜೂ. 6 ರಂದು ವಿಸ್ವ ಪರಿಸರ ದಿನಾಚರಣೆಯನ್ನು ಆಚರಿಸಲಾಯಿತು.
ವೇಣೂರು ವಲಯ ಅರಣ್ಯಾಧಿಕಾರಿ ಪ್ರಶಾಂತ್ ಕುಮಾರ್ ಪೈ ಅವರು ಅರಣ್ಯ ಸಂರಕ್ಷಣೆಯ ಬಗ್ಗೆ ಮಾಹಿತಿ ನೀಡಿದರು. ದಿನೇಶ್ ನಾಯಕ್ ಸುಳ್ಯ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದರು. ಉಪ ವಲಯ ಅರಣ್ಯಾಧಿಕಾರಿ ಸುನೀಲ್ ಕುಮಾರ್ ಕೆ.ಎಸ್., ಶಾಲಾ ಸಂಚಾಲಕಿ ಭ| ಮೇರಿ ಡಿಸೋಜ, ಶಾಲಾ ಶಿಕ್ಷಕ-ರಕ್ಷಕ ಸಂಘದ ಉಪಾಧ್ಯಕ್ಷೆ ಸುನೀತಾ ರೇಗೋ, ಶಾಲೆಯ ಮುಖ್ಯ ಶಿಕ್ಷಕಿ ಭ| ಶಾಲಿನಿ ಡಿಸೋಜ, ಶಿಕ್ಷಕ ವೃಂದ ಹಾಗೂ ವಿದ್ಯಾರ್ಥಿ ಪೋಷಕರು, ಅರಣ್ಯ ಇಲಾಖೆಯ ಸಿಬ್ಬಂದಿ ಉಪಸ್ಥಿತರಿದ್ದರು.
ವಿದ್ಯಾರ್ಥಿ ಯಕ್ಷಿತ್ ಸ್ವಾಗತಿಸಿ, ವಿದ್ಯಾರ್ಥಿನಿ ವಿಯೋಲ ಮೋರಸ್ ವಂದಿಸಿದರು. ವಿದ್ಯಾರ್ಥಿಗಳಾದ ಶಾವಂತ್ ಮತ್ತು ಇಷಾನ್ ಕಾರ್ಯಕ್ರಮ ನಿರೂಪಿಸಿದರು. ಇದಕ್ಕೂ ಮೊದಲು ಶಾಲಾ ಮಕ್ಕಳಿಂದ ಪರಿಸರ ಜಾಗೃತಿ ಕುರಿತು ನಾಟಕ, ಪದ್ಯ ಹಾಗೂ ನೃತ್ಯ ಕಾರ್ಯಕ್ರಮ ಜರಗಿತು.