ಅಳದಂಗಡಿ ಶ್ರೀ ಸತ್ಯದೇವತೆ ಸನ್ನಿಧಿಯಿಂದ ಉಚಿತ ಪುಸ್ತಕ ವಿತರಣೆ, ಸನ್ಮಾನ

ಅಳದಂಗಡಿ: ಶ್ರೀ ಸತ್ಯದೇವತೆ ( ಕಲ್ಲುರ್ಟಿ) ದೈವಸ್ಥಾನ ಅಳದಂಗಡಿ ಸನ್ನಿಧಿಯಿಂದ 15ನೇ ವರ್ಷದ ಉಚಿತ ಪುಸ್ತಕ ವಿತರಣೆ, ಪ್ರತಿಭಾ ಪುರಸ್ಕಾರ ಸಮಾರಂಭ ಹಾಗೂ ಭಾರತೀಯ ಸೇನಾ ಯೋಧರಿಗೆ ಸನ್ಮಾನ ಕಾರ್ಯಕ್ರಮವು ಜೂ.8 ರಂದು ಶ್ರೀ ಸೋಮನಾಥೇಶ್ವರೀ ದೇವಸ್ಥಾನದ ರಾಜಾಂಗಣದಲ್ಲಿ ಜರುಗಿತು.
ಕಾರ್ಯಕ್ರಮವನ್ನು ಕರ್ನಾಟಕ ಸರಕಾರದ ಲೋಕಾಯುಕ್ತ, ನ್ಯಾಯಮೂರ್ತಿ ವಿಶ್ವನಾಥ ಶೆಟ್ಟಿ ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ಕರ್ನಾಟಕ ಉಚ್ಛ ನ್ಯಾಯಾಲಯದ ವಿಶ್ರಾಂತ ನ್ಯಾಯಮೂರ್ತಿ ಜಸ್ಟೀಸ್ ಅಜಿತ್ ಜೆ ಗುಂಜಾಲ್, ಬೆಳ್ತಂಗಡಿ ಶಾಸಕ ಹರೀಶ್ ಪೂಂಜ, ವಿಧಾನ ಪರಿಷತ್ ಸದಸ್ಯ ಕೆ.ಹರೀಶ್ ಕುಮಾರ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಅಳದಂಗಡಿ ಅರಮನೆಯ ತಿಮ್ಮಣ್ಣರಸರಾದ ಡಾ| ಪದ್ಮಪ್ರಸಾದ್ ಅಜಿಲ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಬೆಂಗಳೂರು ತುಳುಕೂಟದ ಅಧ್ಯಕ್ಷ ದಿನೇಶ್ ಹೆಗ್ಡೆ, ಬೆಂಗಳೂರು ಉದ್ಯಮಿ ದೇವೇಂದ್ರ ಹೆಗ್ಡೆ, ಅಳದಂಗಡಿ ಗ್ರಾ.ಪಂ ಅಧ್ಯಕ್ಷ ಸತೀಶ್ ಮಿತ್ತಮಾರ್, ಅಳದಂಗಡಿ ಕ್ಷೇತ್ರದ ತಾ.ಪಂ.ಸದಸ್ಯ ಸುಧೀರ್ ಆರ್ ಸುವರ್ಣ ವೇದಿಕೆಯಲ್ಲಿ ಗೌರವ ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ೨೦೧೮-೧೯ನೇ ಶೈಕ್ಷಣಿಕ ಸಾಲಿನ ಎಸ್ಸೆಸ್ಸೆಲ್ಸಿ ಹಾಗೂ ಪಿಯುಸಿ ಪರೀಕ್ಷೆಯಲ್ಲಿ ವಿಶೇಷ ಸಾಧನೆಗೈದ ವಿದ್ಯಾರ್ಥಿಗಳನ್ನು ಹಾಗೂ ಭಾರತೀಯ ಸೇನಾ ಯೋಧರಾದ ಹರಿಶ್ಚಂದ್ರ, ಹರ್ಷಿತ್ ಕೆ, ಮೋಹನ ಕುಲಾಲ್ ಇವರುಗಳನ್ನು ಸನ್ಮಾನಿಸಿ ಗೌರವಿಸಲಾಯಿತು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.