ಜೂ. 11: ಏಷ್ಯಾದ ಪ್ರಥಮ ನೇಚುರೋಪತಿ ಕಾಲೇಜು ಉಜಿರೆಯಲ್ಲಿ 25ನೇ ವರ್ಷದ ಘಟಿಕೋತ್ಸವ

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ವಿದ್ಯಾ ಸಂಸ್ಥೆಗಳ ಆಡಳಿತಕ್ಕೊಳಪಟ್ಟಿರುವ ಏಷ್ಯಾದ ಮೊದಲ ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನಗಳ ಮಹಾವಿದ್ಯಾಲಯ(ನೇಚುರೋಪತಿ ಕಾಲೇಜು) ಇದರ 25 ನೇ ವರ್ಷದ ಪದವಿ ಪ್ರಧಾನ ಸಮಾರಂಭ, 130 ರಷ್ಟು ವಿದ್ಯಾರ್ಥಿಗಳಿರುವ ಅತೀ ದೊಡ್ಡ ಬ್ಯಾಚ್‌ನ ಪ್ರದಪ್ರದಾನ ಸಮಾರಂಭ ಜೂ. 11 ರಂದು ಕಾಲೇಜಿನ ಸಭಾಂಗಣದಲ್ಲಿ ನಡೆಯಲಿದೆ ಎಂದು ಪ್ರಾಂಶುಪಾಲ ಡಾ. ಪ್ರಶಾಂತ್ ಶೆಟ್ಟಿ ತಿಳಿಸಿದರು. ಅವರು ಉಜಿರೆ ನ್ಯಾಚುರೋಪತಿ ಕಾಲೇಜಿನಲ್ಲಿ ಜೂ.8 ರಂದು ನಡೆದ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ  ಮಾತನಾಡಿದರು.

ಇದೇ ಸಮಾರಂಭದಲ್ಲಿ ನಮ್ಮ ಕಾಲೇಜಿನಲ್ಲಿ ಇದುವರೆಗೆ ಕಲಿತ ವಿದ್ಯಾರ್ಥಿಗಳು ಇಂದು ವಿಶ್ವದ ನಾನಾ ಕಡೆಗಳಲ್ಲಿ ಕರ್ತವ್ಯದಲ್ಲಿದ್ದಾರೆ. 40 ನೇಚುರೋಪತಿ ಸಂಸ್ಥೆಗಳಲ್ಲಿ ಪ್ರಾಂಶುಪಾಲರಾಗಿರುವವರೂ ನಮ್ಮ ಸಂಸ್ಥೆಯ ವಿದ್ಯಾರ್ಥಿಗಳಾಗಿದ್ದಾರೆ. ಅವರ ಮಾಹಿತಿಯುಳ್ಳ ಡೈರೆಕ್ಟರಿಯನ್ನು ಅಂದು ಅತಿಥಿಗಳು ಬಿಡುಗಡೆಗೊಳಿಸಲಿದ್ದಾರೆ. ಸಮಾರಂಭದ ಅಧ್ಯಕ್ಷತೆಯನ್ನು ಧಾರವಾಡ ಶ್ರೀ ಮಂಜುನಾಥೇಶ್ವರ ವಿಶ್ವವಿದ್ಯಾನಿಲಯದ ಕುಲಪತಿ ಡಾ. ಡಿ ವೀರೇಂದ್ರ ಹೆಗ್ಗಡೆಯವರು ವಹಿಸಲಿದ್ದಾರೆ. ಪ್ರದವಿ ಪ್ರದಾನ ಭಾಷಣವನ್ನು ಭಾರತ ಸರಕಾರದ ಆಯುಷ್ ಇಲಾಖೆ ಮತ್ತು ರಕ್ಷಣಾ ಖಾತೆ ರಾಜ್ಯ ಸಚಿವ ಶ್ರೀಪಾದ್ ಯಸ್ಸೋ ನಾಕ್ ನೆರವೇರಿಸಲಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ ಖಾದರ್, ಶಾಸಕ ಹರೀಶ್ ಪೂಂಜ, ಆಯುಷ್ ಇಲಾಖೆ ಆಯುಕ್ತೆ ಮೀನಾಕ್ಷಿ ನೇಗಿ ಭಾಗಿಯಾಗಲಿದ್ದಾರೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಡಾ. ಗೀತಾ, ಡಾ ಸುಜಾತಾ ಮತ್ತು ಡಾ. ಶಿವಪ್ರಸಾದ್ ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.