ಬೆಳ್ತಂಗಡಿ ಯುವವಾಹಿನಿ ಘಟಕದ ವತಿಯಿಂದ ಗುರು ಸಂದೇಶ ಕಾರ್ಯಕ್ರಮ

ಬೆಳ್ತಂಗಡಿ: ಯುವವಾಹಿನಿ ಬೆಳ್ತಂಗಡಿ ಘಟಕದ ಆಶ್ರಯದಲ್ಲಿ ಗುರು ಸಂದೇಶ ಕಾರ್ಯಕ್ರಮವು ಇತ್ತೀಚೆಗೆ  ಬೆಳ್ತಂಗಡಿ ಸಂತೆಕಟ್ಟೆ ಬಳಿಯ ಸುವರ್ಣ ಆರ್ಕೆಡ್‌ನಲ್ಲಿ ಜರುಗಿತು.
ಕೇರಳ ಶಿವಗಿರಿ ಮಠದ ಶ್ರೀ ಸತ್ಯಾನಂದ ತೀರ್ಥ ಸ್ವಾಮೀಜಿಯವರು ಕಾರ್ಯಕ್ರಮವನ್ನು ಉದ್ಘಾಟಿಸಿ, ಆಶೀರ್ವಚನ ನೀಡಿದರು. ಈ ಸಂದರ್ಭದಲ್ಲಿ ಯುವವಾಹಿನಿ ಬೆಳ್ತಂಗಡಿ ಘಟಕದ ಅಧ್ಯಕ್ಷ ಹರೀಶ್ ಸುವರ್ಣ ಕನ್ಯಾಡಿ, ಸುವರ್ಣ ಸಾಂಕ್ಕೃತಿಕ ಪ್ರತಿಷ್ಠಾನದ ಅಧ್ಯಕ್ಷ ಹಾಗು ಘಟಕದ ಸಲಹೆಗಾರ ಸಂಪತ್ ಬಿ ಸುವರ್ಣ, ಘಟಕದ ಮಾಜಿ ಅಧ್ಯಕ್ಷ, ಶ್ರೀರಾಮ ಕ್ಷೇತ್ರ ಸೇವಾ ಸಮಿತಿ ಕನ್ಯಾಡಿ ಬೆಳ್ತಂಗಡಿ ತಾಲೂಕು ಸಮಿತಿಯ ಅಧ್ಯಕ್ಷ ಸದಾನಂದ ಪೂಜಾರಿ ಉಂಗಿಲಬೈಲು, ಸಲಹೆಗಾರ ಗೋಪಾಲಕೃಷ್ಣ ಸಾಲ್ಯಾನ್ ಉಪಸ್ಥಿತರಿದ್ದರು.
ಘಟಕದ ಉಪಾಧ್ಯಕ್ಷ ಜಯರಾಜ್ ನಡಕ್ಕರ ಪ್ರಾರ್ಥಿಸಿ, ನಾರಾಯಣ ಗುರು ತತ್ವ ಪ್ರಚಾರ ನಿರ್ದೇಶಕ ಎಂ.ಕೆ ಪ್ರಸಾದ್ ಸ್ವಾಗತಿಸಿ, ಕಾರ್ಯದರ್ಶಿ ವಿಜಯ ಕುಮಾರ್ ಶಿರ್ಲಾಲು ವಂದಿಸಿ, ಸಂಘಟನೆ ಕಾರ್ಯದರ್ಶಿ ಗುರುಪ್ರಸಾದ್ ಗುರಿಪಳ್ಳ ಕಾರ್ಯಕ್ರಮ ನಿರೂಪಿಸಿದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.