ವೇಣೂರು: ಅಜಿಲ ಸೀಮೆಯ ಪ್ರಧಾನ ದೇವರು ವೇಣೂರು ಶ್ರೀ ಮಹಾಲಿಂಗೇಶ್ವರ ಸ್ವಾಮಿಯ ದೇವಸ್ಥಾನವನ್ನು ರೂ.4 ಕೋಟಿ ವೆಚ್ಚದಲ್ಲಿ ಶಿಲಾಮಯ ದೇಗುಲವಾಗಿ ಪುನರ್ ನಿರ್ಮಿಸಲು ಭಕ್ತರು ಸಂಕಲ್ಪ ಮಾಡಿದ್ದು, ಇದರನ್ವಯ ದೇಗುಲದ ಶಿಲಾನ್ಯಾಸ ಕಾರ್ಯಕ್ರಮವು ಜೂ.20ರಂದು ನಡೆಯಲಿದೆ ಎಂದು ದೇವಸ್ಥಾನದ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಅಳದಂಗಡಿ ಅರಮನೆಯ ತಿಮ್ಮಣ್ಣರಸರಾದ ಡಾ| ಪದ್ಮಪ್ರಸಾದ ಅಜಿಲ ತಿಳಿಸಿದರು.
ಅವರು ಜೂ.18ರಂದು ಬೆಳ್ತಂಗಡಿ ಪ್ರವಾಸಿ ಮಂದಿರದಲ್ಲಿ ನಡೆದ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು. ಶಿಲಾನ್ಯಾಸ ಕಾರ್ಯಕ್ರಮವನ್ನು ಶ್ರೀ ಶಾರದಾ ಪೀಠ ಶೃಂಗೇರಿಯ ಜಗದ್ಗುರು ಶಂಕರಾಚಾರ್ಯ ಶ್ರೀ ವಿಧುಶೇಖರ ಭಾರತೀ ಸ್ವಾಮೀಜಿಯವರು ನೆರವೇರಿಸಲಿದ್ದು, ಮುಖ್ಯ ಅತಿಥಿಗಳಾಗಿ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ರಾಜರ್ಷಿ ಡಾ. ಡಿ.ವೀರೇಂದ್ರ ಹೆಗ್ಗಡೆ, ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ ಖಾದರ್, ಶಾಸಕರುಗಳಾದ ಹರೀಶ್ ಪೂಂಜ, ಹರೀಶ್ ಕುಮಾರ್, ಭೋಜೇ ಗೌಡ, ಮಾಜಿ ಶಾಸಕ ವಸಂತ ಬಂಗೇರ, ಆಳ್ವಾಸ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಡಾ| ಮೋಹನ್ ಆಳ್ವ, ಉದ್ಯಮಿಗಳಾದ ಸುರೇಶ್ ಶೆಟ್ಟಿ ಗುರ್ಮೆ, ರಘುನಾಥ ಸೋಮಯಾಜಿ, ರವಿಶಂಕರ ಶೆಟ್ಟಿ ಬಡಾಜೆಗುತ್ತು, ಶ್ರೀಪತಿ ಭಟ್, ಆದ್ಯಪಾಡಿ ದೇವಸ್ಥಾನದ ಆಡಳಿತದಾರ ಮಂಜುನಾಥ ಭಂಡಾರಿ ಭಾಗವಹಿಸಲಿದ್ದಾರೆ ಎಂದು ಅವರು ತಿಳಿಸಿದರು .
ಪತ್ರಿಕಾಗೋಷ್ಠಿಯಲ್ಲಿ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಎ.ಜಯರಾಮ ಶೆಟ್ಟಿ, ಜೀಣೋದ್ಧಾರ ಸಮಿತಿ ಕಾರ್ಯಾಧ್ಯಕ್ಷರಾದ ಪಿ. ಧರಣೇಂದ್ರ ಕುಮಾರ್, ಸೋಮಯ್ಯ ಹನೈನಡೆ, ಸುಂದರ ಹೆಗ್ಡೆ, ಪ್ರಧಾನ ಕಾರ್ಯದರ್ಶಿ ಪ್ರಭಾಕರ ಹೆಗ್ಡೆ ಹಟ್ಟಾಜೆಗುತ್ತು, ಕಿಶೋರ್ ಭಂಡಾರಿ ಬೆಳ್ಳೂರು, ಶಶಿಧರ ಶೆಟ್ಟಿ ನಾರಡ್ಕ ಉಪಸ್ಥಿತರಿದ್ದರು.