ವೇಣೂರು: ಅಜಿಲ ಸೀಮೆಯ ಪ್ರಧಾನ ದೇವರು ವೇಣೂರು ಶ್ರೀ ಮಹಾಲಿಂಗೇಶ್ವರ ಸ್ವಾಮಿಯ ದೇವಸ್ಥಾನವನ್ನು ರೂ.4 ಕೋಟಿ ವೆಚ್ಚದಲ್ಲಿ ಶಿಲಾಮಯ ದೇಗುಲವಾಗಿ ಪುನರ್ ನಿರ್ಮಿಸಲು ಭಕ್ತರು ಸಂಕಲ್ಪ ಮಾಡಿದ್ದು, ಇದರನ್ವಯ ದೇಗುಲದ ಶಿಲಾನ್ಯಾಸ ಕಾರ್ಯಕ್ರಮವು ಇಂದು (ಜೂ.20) ಜರುಗಿತು.
ಶಿಲಾನ್ಯಾಸ ಕಾರ್ಯಕ್ರಮವನ್ನುಶ್ರೀ ಶಾರದಾ ಪೀಠ ಶೃಂಗೇರಿಯ ಜಗದ್ಗುರು ಶಂಕರಾಚಾರ್ಯ ಶ್ರೀ ವಿಧುಶೇಖರ ಭಾರತೀ ಸ್ವಾಮೀಜಿಯವರು ನೆರವೇರಿಸಿದರು. ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ರಾಜರ್ಷಿ ಡಾ. ಡಿ.ವೀರೇಂದ್ರ ಹೆಗ್ಗಡೆಯವರು ಗೌರವ ಉಪಸ್ಥಿತರಿದ್ದರು. ಮುಖ್ಯ ಅತಿಥಿಗಳಾಗಿ ಶಾಸಕ ಹರೀಶ್ ಪೂಂಜ, ಮಾಜಿ ಶಾಸಕ ವಸಂತ ಬಂಗೇರ, ಆಳ್ವಾಸ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಡಾ| ಮೋಹನ್ ಆಳ್ವ, ಉದ್ಯಮಿ ಸುರೇಶ್ ಶೆಟ್ಟಿ ಗುರ್ಮೆ, ರವಿಶಂಕರ ಶೆಟ್ಟಿ ಬಡಾಜೆಗುತ್ತು, ಶ್ರೀಪತಿ ಭಟ್, ಭಾಗವಹಿಸಿದ್ದರು .
ಕಾರ್ಯಕ್ರಮದಲ್ಲಿ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಅಳದಂಗಡಿ ಅರಮನೆಯ ತಿಮ್ಮಣ್ಣರಸರಾದ ಡಾ| ಪದ್ಮಪ್ರಸಾದ ಅಜಿಲ, ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಎ.ಜಯರಾಮ ಶೆಟ್ಟಿ, ಜೀರ್ಣೋದ್ಧಾರ ಸಮಿತಿ ಕಾರ್ಯಾಧ್ಯಕ್ಷರಾದ ಪಿ. ಧರಣೇಂದ್ರ ಕುಮಾರ್, ಸೋಮಯ್ಯ ಹನೈನಡೆ, ಸುಂದರ ಹೆಗ್ಡೆ, ಪ್ರಧಾನ ಕಾರ್ಯದರ್ಶಿ ಪ್ರಭಾಕರ ಹೆಗ್ಡೆ ಹಟ್ಟಾಜೆಗುತ್ತು, ಕಿಶೋರ್ ಭಂಡಾರಿ ಬೆಳ್ಳೂರು, ಶಶಿಧರ ಶೆಟ್ಟಿ ನಾರಡ್ಕ ಮತ್ತಿತರ ಗಣ್ಯರು ಉಪಸ್ಥಿತರಿದ್ದು , ಕಾರ್ಯಕ್ರಮದ ಯಶಸ್ವಿಗೆ ಸಹಕರಿಸಿದರು.