ಧರ್ಮಸ್ಥಳದಲ್ಲಿ 5ನೇ ವಿಶ್ವ ಯೋಗ ದಿನಾಚರಣೆ

Advt_NewsUnder_1
Advt_NewsUnder_1
Advt_NewsUnder_1

ಧರ್ಮಸ್ಥಳ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನಗಳ ಮಹಾವಿದ್ಯಾಲಯ ಮತ್ತು ಆಸ್ಪತ್ರೆ, ಶ್ರೀ ಧ.ಮಂ. ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ ಇದರ ಆಶ್ರಯದಲ್ಲಿ ಧರ್ಮಸ್ಥಳದ ಅಮೃತವರ್ಷಿಣಿ ಸಭಾ ಭವನದಲ್ಲಿ  5ನೇ ವಿಶ್ವಯೋಗ ದಿನಾಚರಣೆ  ಜರುಗಿತು.

ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ಯವರು ಕಾರ್ಯಕ್ರಮದ  ಅಧ್ಯಕ್ಷತೆ ವಹಿಸಿದ್ದರು.  ಕಾರ್ಯಕ್ರಮದ ಉದ್ಘಾಟನೆಯನ್ನು ಶ್ರೀಮತಿ ಹೇಮಾವತಿ ವಿ.ಹೆಗ್ಗಡೆಯವರು ನೆರವೇರಿಸಿದರು.

ವೇದಿಕೆಯಲ್ಲಿ ಕರ್ನಾಟಕ ಸರಕಾರದ ಸಣ್ಣ ನೀರಾವರಿ ಸಚಿವ ಸಿ.ಎಸ್. ಪುಟ್ಟರಾಜು , ಕರ್ನಾಟಕ ರಾಜೀವಗಾಂಧಿ ಆರೋಗ್ಯ ವಿಶ್ವವಿದ್ಯಾನಿಲಯದ ಉಪ ಕುಲಪತಿ ಡಾ|ಎಸ್ . ಸಚ್ಚಿದಾನಂದ ,ಶಾಸಕ ಹರೀಶ್ ಪೂಂಜಾ , ಮಾಜಿ ಸಚಿವ ಅಭಯಚಂದ್ರ ಜೈನ್, ಮಣಿಪಾಲ ಸಿಂಡಿಕೇಟ್ ಬ್ಯಾಂಕ್ ವಲಯ ಕಚೇರಿ ಜನರಲ್ ಮ್ಯಾನೇಜರ್  ಭಾಸ್ಕರ್ ಹಂದೆ,  ಕರ್ನಾಟಕ ರಾಜೀವಗಾಂಧಿ ಆರೋಗ್ಯ ವಿಶ್ವವಿದ್ಯಾನಿಲಯದ ಉಪ ಕುಲಸಚಿವ ಡಾ| ಬಿ.ವಸಂತ ಶೆಟ್ಟಿ, ಎಸ್ ಡಿಎಂ ಶಿಕ್ಷಣಸಂಸ್ಥೆಗಳ ಕಾರ್ಯದರ್ಶಿ ಡಾ।ಯಶೋವರ್ಮ, ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನಗಳ ಮಹಾವಿದ್ಯಾಲಯ ಪ್ರಾಂಶುಪಾಲ ಡಾ| ಪ್ರಶಾಂತ್ ಶೆಟ್ಟಿ , ಡಾ| ಜಾಸ್ಮೀನ್ ಡಿ’ಸೋಜಾ , ನಿರ್ದೇಶಕ ಡಾ. ಐ. ಶಶಿಕಾಂತ್ ಜೈನ್, ಟ್ರಸ್ಟ್‌ನ ಕಾರ್ಯದರ್ಶಿ ಸೀತರಾಮ ತೋಳ್ಪಾಡಿತ್ತಾಯ, ಮತ್ತಿತರ ಗಣ್ಯರು ಉಪಸ್ಥಿತರಿದ್ದರು.

ಜಾಗತಿಕ ಮಟ್ಟದಲ್ಲಿ ಉನ್ನತ ಸಾಧನೆ ಮಾಡಿ ಗಿನ್ನೆಸ್ ದಾಖಲೆಗೆ ಸೇರ್ಪಡೆಯಾದ ಉಡುಪಿಯ ಸೈಂಟ್ ಸಿಸಿಲೀಸ್ ಶಾಲೆಯ ಆರನೆ ತರಗತಿ ವಿದ್ಯಾರ್ಥಿನಿ ಕು. ತನುಶ್ರೀ ಪಿತ್ರೋಡಿ ಎಂಬ ಬಾಲಕಿಗೆ “ಯೋಗರತ್ನ” ಪುರಸ್ಕಾರ ನೀಡಿ ಗೌರವಿಸಲಾಯಿತು.

ಈ ಸಂಧರ್ಭದಲ್ಲಿ  ಯೋಗದಲ್ಲಿ ಉನ್ನತ ಸಾಧನೆ ಮಾಡಿದವರಿಗೆ ಧರ್ಮಸ್ಥಳ ಶಾಂತಿವನ ಟ್ರಸ್ಟ್‌ನಿಂದ ರಾಷ್ಟ್ರಮಟ್ಟದಲ್ಲಿ `ಯೋಗ ರತ್ನ’ ಪ್ರಶಸ್ತ್ರಿ ನೀಡಿ ಗೌರವಿಸಲಾಯಿತು. ಶಿಬಿರಾರ್ಥಿಗಳಿಂದ ಯೋಗ ಪ್ರಾತ್ಯಕ್ಷತೆ ನಡೆಯಿತು.

 

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.