ಉಜಿರೆ : ಉಜಿರೆ ಶ್ರೀ ಜನಾರ್ದನ ದೇವಸ್ಥಾನದಲ್ಲಿ ಪ್ರತಿ ವರ್ಷದಂತೆ ಆಷಾಢ ಮಾಸದ ಪ್ರಥಮೈಕಾದಶಿಯಂದು ಜುಲೈ 12 ರಂದು ದೇವಸ್ಥಾನದ ಆಡಳಿತ ಮೊಕ್ತೇಸರ ವಿಜಯರಾಘವ ಪಡ್ವೆಟ್ನಾಯರ ನೇತೃತ್ವದಲ್ಲಿ ಸುಬ್ರಹ್ಮಣ್ಯ ಮಠದ ಶ್ರೀ ವಿದ್ಯಾಪ್ರಸನ್ನ ತೀರ್ಥ ಶ್ರೀಗಳವರಿಂದ ಬೆಳಿಗ್ಗೆ 7.30 ರಿಂದ ತಪ್ತಮುದ್ರಾಧಾರಣೆ ನಡೆಯಲಿದೆ. ಸಮಸ್ತ ಭಕ್ತ ಬಾಂಧವರು ಶ್ರೀಗಳವರಿಂದ ಮುದ್ರಾಧಾರಣೆ ಹಾಕಿಸಿಕೊಳ್ಳಲು ಅವಕಾಶವಿದೆಯೆಂದು ದೇವಸ್ಥಾನದ ಆಡಳಿತ ಮೊಕ್ತೇಸರ ವಿಜಯರಾಘವ ಪಡ್ವೆಟ್ನಾಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.