ಧರ್ಮಸ್ಥಳ ಗ್ರಾ.ಪಂ. ಗ್ರಂಥಾಲಯದ ನೂತನ ಕಟ್ಟಡದ ಶಂಕು ಸ್ಥಾಪನೆ

ಬೆಳ್ತಂಗಡಿ : ಸಾರ್ವಜನಿಕ ಗ್ರಂಥಾಲಯ ಇಲಾಖೆ. ಜಿಲ್ಲಾ ಕೇಂದ್ರ ಗ್ರಂಥಾಲಯ ಮಂಗಳೂರು ಹಾಗೂ ಗ್ರಾಮ ಪಂಚಾಯತ್ ಧರ್ಮಸ್ಥಳ ಇದರ ವತಿಯಿಂದ ಗ್ರಾಮ ಪಂಚಾಯತ್ ಗ್ರಂಥಾಲಯದ ನೂತನ ಕಟ್ಟಡದ ಶಂಕು ಸ್ಥಾಪನೆ ಕಾರ್ಯಕ್ರಮವು ಧರ್ಮಸ್ಥಳ ಗ್ರಾಮ ಪಂಚಾಯತ್ ಆವರಣದಲ್ಲಿ ಜರುಗಿತು.

ನೂತನ ಕಟ್ಟಡದ ಶಂಕು ಸ್ಥಾಪನೆಯನ್ನು ಶಾಸಕ ಹರೀಶ್ ಪೂಂಜ ನೇರವೇರಿಸಿ, ಆದಷ್ಟು ಶೀಘ್ರ ಹೊಸ ಕಟ್ಟಡ ರಚನೆಯಾಗಿ ಜನರಿಗೆ ಪ್ರಯೋಜನ ದೊರಕುವಂತಾಗಲಿ ಎಂದು  ಶುಭ ಹಾರೈಸಿದರು. ಗ್ರಾಮ ಪಂಚಾಯತ್ ಅಧ್ಯಕ್ಷ ಚಂದನ್ ಪ್ರಸಾದ್ ಕಾಮತ್, ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಅಧ್ಯಕ್ಷ ಕೇಶವ ಪಿ, ಧರ್ಮಸ್ಥಳ ಸೇವಾ ಸಹಕಾರಿ ಬ್ಯಾಂಕಿನ ಅಧ್ಯಕ್ಷ ಹರಿದಾಸ್ ಗಾಂಭೀರ, ಜಿಲ್ಲಾ ಪಂಚಾಯತ್ ಸದಸ್ಯ ಕೊರಗಪ್ಪ ನಾಯ್ಕ, ತಾ.ಪಂ. ಸದಸ್ಯೆ  ಎಲ್ ಲಕ್ಷ್ಮಿ ಜನಾರ್ಧನ, ಗ್ರಾಮಪಂಚಾಯತ್ ಉಪಾಧ್ಯಕ್ಷೆ ಜಯಂತಿ, ಜಿಲ್ಲಾ ಗ್ರಂಥಾಲಯ ಪ್ರಾಧಿಕಾರದ ಉಪಾಧ್ಯಕ್ಷ ಬಾಹುಬಲಿ ಪ್ರಸಾದ್, ಸದಸ್ಯರಾದ ಸುಚರಿತ ಶೆಟ್ಟಿ, ದಕ್ಷಿಣ ಕನ್ನಡ ನಿರ್ಮಿತಿ ಕೇಂದ್ರ ಅಭಿಯಂತರ ನವೀನ್, ಗುತ್ತಿಗೆದಾರ  ಪ್ರಕಾಶ್, ಧರ್ಮಸ್ಥಳ ಜಮಾ ಉಗ್ರಾಣದ ಮುತ್ಸದಿ  ಬಿ. ಭುಜಬಲಿ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಉಮೇಶ್ ಮತ್ತು ಗ್ರಾಮ ಪಂಚಾಯತ್ ಸದಸ್ಯರು, ಊರವರು ಉಪಸ್ಥಿತರಿದ್ದರು.

ಜಿಲ್ಲಾ ಮುಖ್ಯ ಗ್ರಂಥಾಲಯ ಅಧಿಕಾರಿ   ಮಮತ ರೈ ಕಾರ್ಯಕ್ರಮ ನಿರ್ವಹಿಸಿ, ಧರ್ಮಸ್ಥಳ ಗ್ರಾಮ ಪಂಚಾಯಿತಿ ಗ್ರಂಥಾಲಯ ಮೇಲ್ವಿಚಾರಕಿ  ಮಂಜುಳಾ ಕಿಶೋರ್ ಧನ್ಯವಾದವಿತ್ತರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.