ಗುರುವಾಯನಕೆರೆ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬೆಳ್ತಂಗಡಿ ತಾಲೂಕಿನ ವಿಭಜಿತ ಗುರುವಾಯನಕೆರೆ ನೂತನ ಕಛೇರಿಯ ಉದ್ಘಾಟನೆಯು ಇಂದು(ಜೂ.25) ಗುರುವಾಯನಕೆರೆ ಸೇವಾಸಹಕಾರಿ ಬ್ಯಾಂಕ್ ನೂತನ ಯೋಜನಾ ಕಛೇರಿಯಲ್ಲಿ ಜರುಗಿತು.
ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯನಿರ್ವಾಹಕ ನಿರ್ದೇಶಕ ಎಲ್.ಹೆಚ್ ಮಂಜುನಾಥ್ ನೂತನ ಕಛೇರಿಯ ಉದ್ಘಾಟನೆಯನ್ನು ನೆರವೇರಿಸಿ, ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಕುವೆಟ್ಟು ಗ್ರಾ.ಪಂ ಅಧ್ಯಕ್ಷ ಅಶೋಕ್ ಕೋಟ್ಯಾನ್, ಕುವೆಟ್ಟು ಕ್ಷೇತ್ರದ ಜಿ.ಪಂ ಸದಸ್ಯೆ ಮಮತಾ ಎಂ. ಶೆಟ್ಟಿ, ತಾ.ಪಂ ಸದಸ್ಯರಾದ ಗೋಪಿನಾಥ ನಾಯಕ್, ಕೇಶವತಿ, ತಾಲೂಕು ಯೋಜನಾಧಿಕಾರಿ ಜಯಕರ ಶೆಟ್ಟಿ, ತಾಲೂಕು ಜನಜಾಗೃತಿ ವೇದಿಕೆಯ ಮಾಜಿ ಅಧ್ಯಕ್ಷೆ ಶಾರದಾ ಆರ್ ರೈ, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಸ್ಥಾಪಕಾಧ್ಯಕ್ಷ ವಸಂತ ಸಾಲ್ಯಾನ್, ಸಿಂಡಿಕೇಟ್ ಬ್ಯಾಂಕ್ ಮ್ಯಾನೇಜರ್ ಸುಜಿತ್, ಉಡುಪಿ ಪ್ರಾದೇಶಿಕ ನಿರ್ದೇಶಕ ಮಹಾವೀರ ಅಜ್ರಿ, ಪ್ರಮುಖರಾದ ಪ್ರಭಾಕರ ಗೌಡ ಪೊಸಂದೋಡಿ, ಯೋಗೀಶ್ ಪೂಜಾರಿ ನಡಕ್ಕರ, ಮತ್ತಿತರ ಗಣ್ಯರು ಉಪಸ್ಥಿತರಿದ್ದರು.