ಬಳಂಜ: ಸಭಾಭವನ ನಿರ್ಮಾಣ ಅನುದಾನಕ್ಕೆ ಕೋಟ ಶ್ರೀನಿವಾಸ ಪೂಜಾರಿ ಯವರಿಗೆ ಮನವಿ

ಬಳಂಜ: ಬ್ರಹ್ಮಶ್ರೀ ನಾರಾಯಣಗುರು ಸೇವಾ ಸಮಿತಿ ಬಳಂಜ, ಯುವ ಬಿಲ್ಲವ ವೇದಿಕೆ ಮತ್ತು ಮಹಿಳಾ ಬಿಲ್ಲವ ವೇದಿಕೆ ಬಳಂಜ-ನಾಲ್ಕೂರು-ತೆಂಕಕಾರಂದೂರು ಸಂಘವು ಕಳೆದ 39 ವರ್ಷಗಳಿಂದ ವಿವಿಧ ಧಾರ್ಮಿಕ, ಸಾಮಾಜಿಕ ಹಾಗೂ ಶೈಕ್ಷಣಿಕ ಕ್ಷೇತ್ರದಲ್ಲಿ ಸಮಾಜ ಸೇವೆಗೈಯ್ಯುತ್ತಿದ್ದು, ಈಗಾಗಲೇ 67 ಸೆಂಟ್ಸ್ ಜಾಗವನ್ನು ಹೊಂದಿದೆ. ಪ್ರಸ್ತುತ ಸುಮಾರು ರೂ. 60 ಲಕ್ಷ ವೆಚ್ಚದಲ್ಲಿ ಬ್ರಹ್ಮಶ್ರೀ ನಾರಾಯಣಗುರು ಸಮುದಾಯ ಭವನ ನಿರ್ಮಾಣಗೊಳ್ಳುತ್ತಿದ್ದು, ಹೆಚ್ಚಿನ ಅನುದಾನಕ್ಕೆ ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿಯವರಿಗೆ ಸಂಘದ ಅಧ್ಯಕ್ಷ ಪ್ರವೀಣ್ ಕುಮಾರ್ ಹೆಚ್.ಎಸ್ ಜೂ.23 ರಂದು ಮನವಿ ನೀಡಿದರು.
ಈ ಸಂದರ್ಭದಲ್ಲಿ ಸಂಗಬೆಟ್ಟು ಕ್ಷೇತ್ರದ ಜಿ.ಪಂ ಸದಸ್ಯ ಎಂ.ತುಂಗಪ್ಪ ಬಂಗೇರ, ಬಿಜೆಪಿ ಬೆಳ್ತಂಗಡಿ ಯುವ ಮೋರ್ಚಾ ಅಧ್ಯಕ್ಷ ಸಂಪತ್ ಬಿ ಸುವರ್ಣ, ಬೆಳ್ತಂಗಡಿ ಶ್ರೀ ನಾರಾಯಣಗುರು ಸ್ವಾಮಿ ಸೇವಾಸಂಘದ ನಿರ್ದೇಶಕ ಸಂತೋಷ್ ಪಿ ಕೋಟ್ಯಾನ್ ಬಳಂಜ, ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾಸಮಿತಿ ಮಾಜಿ ಅಧ್ಯಕ್ಷ ಹೆಚ್.ದೇಜಪ್ಪ ಪೂಜಾರಿ ಸುಧಾಮ, ತಾಲೂಕು ಯುವ ಬಿಲ್ಲವ ವೇದಿಕೆ ಪ್ರಧಾನ ಕಾರ್ಯದರ್ಶಿ ರಂಜಿತ್ ಹೆಚ್.ಡಿ ಹಾಗೂ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.