ಜೆಸಿಐ ಬೆಳ್ತಂಗಡಿ ವತಿಯಿಂದ ಹಣ್ಣಿನ ಗಿಡ ನೆಡುವ ಕಾರ್ಯಕ್ರಮ

ಬೆಳ್ತಂಗಡಿ : ಜೆಸಿಐ ಬೆಳ್ತಂಗಡಿ ಮಂಜುಶ್ರೀ, ಅರಣ್ಯ ಇಲಾಖೆ ಬೆಳ್ತಂಗಡಿ ಇವರ ಜಂಟಿ ಆಶ್ರಯದಲ್ಲಿ ರಾಷ್ಟ್ರೀಯ ಸೇವಾ ಯೋಜನೆ, ಸರಕಾರಿ ಪ್ರಥಮ ದರ್ಜೆ ಕಾಲೇಜು ಬೆಳ್ತಂಗಡಿ ಇದರ ಸ್ವಯಂಸೇವಕರ ಸಹಕಾರದೊಂದಿಗೆ ಜೂ.27 ರಂದು ಮಲವಂತಿಗೆ ಗ್ರಾಮದ ಬೊಳ್ಳಾಜೆ ಅರಣ್ಯ ಪ್ರದೇಶದಲ್ಲಿ ಕಾಡುಜಾತಿಯ ಹಲವಾರು ಹಣ್ಣಿನ ಗಿಡಗಳನ್ನು ನೆಡಲಾಯಿತು.


ಈ ಸಂದರ್ಭದಲ್ಲಿ ಜೆಸಿಐ ಬೆಳ್ತಂಗಡಿ ಅಧ್ಯಕ್ಷ ಪ್ರಶಾಂತ ಲಾಯಿಲ, ನಿಕಟಪೂರ್ವಾಧ್ಯಕ್ಷ ಕಿರಣ್ ಕುಮಾರ್ ಶೆಟ್ಟಿ, ಜೆಸಿರೇಟ್ ಅಧ್ಯಕ್ಷೆ ಆಶಾಲತ.ಪಿ , ಕೋಶಾಧಿಕಾರಿ ಅಭಿನಂದನ್ ಹರೀಶ್‌ಕುಮಾರ್, ಸದಸ್ಯರಾದ ಗುರುರಾಜ್, ಸಚಿನ್ ಸಾಲ್ಯಾನ್, ಜೆಜೆಸಿ ವಿನಾಯಕ ಪ್ರಸಾದ್, ಮತ್ತು ಎನ್.ಎಸ್.ಎಸ್ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಅರಣ್ಯ ಇಲಾಖೆಯ ವಲಯ ಅರಣ್ಯಾಧಿಕಾರಿ ಸುಬ್ಬಯ್ಯ ನಾಯ್ಕ್ ಇವರ ಮಾರ್ಗದರ್ಶನದಂತೆ ಉಪ ವಲಯ ಅರಣ್ಯಾಧಿಕಾರಿ ರವೀಂದ್ರ ಕೆ, ಅರಣ್ಯ ರಕ್ಷಕ ಆನಂದ್ ಮೋಹಿತ್, ಅರಣ್ಯ ವೀಕ್ಷಕ ರಾಜೇಶ್ ಇವರ ಸಹಕಾರದಲ್ಲಿ ಗಿಡಗಳನ್ನು ನೆಡಲಾಯಿತು.

Advt_NewsUnder_
Advt_NewsUnder_
Advt_NewsUnder_

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.