HomePage_Banner_
HomePage_Banner_
HomePage_Banner_
HomePage_Banner_
HomePage_Banner_
HomePage_Banner_
HomePage_Banner_

ಎನ್.ಜಿ ನಯನ್ ಚಾರಿಟೆಬಲ್ ಟ್ರಸ್ಟ್‌ನಿಂದ ದೇವಾಲಯಕ್ಕೆ ಉಚಿತ ಜಲ ಮರುಪೂರಣ ವ್ಯವಸ್ಥೆ

ಪುಂಜಾಲಕಟ್ಟೆ: ಎನ್.ಜಿ. ನಯನ್ ಚಾರಿಟೆಬಲ್ ಟ್ರಸ್ಟ್ ವತಿಯಿಂದ ಮತ್ತು ಸಮಾನ ಮನಸ್ಕ ಗೆಳೆಯರೊಂದಿಗೆ ಸೇರಿ ನಯನಾಡು ದೇವಾಲಯದ ಆವರಣದಲ್ಲಿ 40ಸಾವಿರ ರೂ. ವೆಚ್ಚದಲ್ಲಿ 2 ಕೊಳವೆ ಬಾವಿಗೆ ಜಲ ಮರುಪೂರಣ ವ್ಯವಸ್ಥೆಯನ್ನು ಉಚಿತವಾಗಿ ಮಾಡಿಕೊಡಲಾಯಿತು. ಮಂಗಳೂರು ಧರ್ಮ ಪ್ರಾಂತ್ಯದ ಧರ್ಮಾಧ್ಯಕ್ಷರು ಜಲ ಮರುಪೂರಣ ವ್ಯವಸ್ಥೆಯನ್ನು ಜೂ.23 ರಂದು ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ನಯನಾಡು ಚರ್ಚ್‌ನ ಧರ್ಮ ಗುರುಗಳು, ಉಪಾಧ್ಯಕ್ಷರು, ಕಾರ್ಯದರ್ಶಿ, ಟ್ರಸ್ಟ್‌ನ ಅಧ್ಯಕ್ಷರು, ಸರ್ವಸದಸ್ಯರು ಹಾಗೂ ಊರಿನ ನಾಗರಿಕರು ಉಪಸ್ಥಿತರಿದ್ದರು.
ಅಂತರ್ಜಲ ಕುಸಿತದಿಂದ ನೀರಿನ ಕೊರತೆ ಉಂಟಾಗಿದ್ದು, ಮಳೆಗಾಲದ ನೀರನ್ನು ಕೊಳವೆಬಾವಿಗೆ ಶುದ್ಧೀಕರಿಸಿ ಬಿಡುವ ವ್ಯವಸ್ಥೆ ಇದಾಗಿದ್ದು, ಜನರಿಗೆ ಅರಿವು ಮೂಡಿಸುವ ಪ್ರಯತ್ನವನ್ನು ಟ್ರಸ್ಟ್ ವತಿಯಿಂದ ಮಾಡಲಾಗಿದೆ.

Advt_NewsUnder_
Advt_NewsUnder_
Advt_NewsUnder_

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.