ಧರ್ಮಸ್ಥಳ: ಕನ್ನಡ ಚಿತ್ರರಂಗದ ಖ್ಯಾತನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ತೂಗುದೀಪ್ ರವರು ಇಂದು (ಜೂ.28) ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ಶ್ರೀ ದೇವರಿಗೆ ವಿಶೇಷ ಪೂಜೆ ಸಲ್ಲಿಸಿದರು.
ಅಲ್ಲಿಂದ ಕೊಕ್ಕಡ ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿ, ಶ್ರೀ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ತೆರಳಿದರು. ಈ ಸಂದರ್ಭದಲ್ಲಿ ದೇವಳದ ವತಿಯಿಂದ ಅರ್ಚಕರು ಅವರಿಗೆ ಶ್ರೀ ದೇವರ ಪ್ರಸಾದ ನೀಡಿ ಗೌರವಿಸಿದರು.