ಶಿರ್ಲಾಲು: ಇಲ್ಲಿಯ ಹಾಲು ಉತ್ಪಾದಕರ ಸಹಕಾರಿ ಸಂಘ ಶಿರ್ಲಾಲು ಇದರ ವಿಸ್ತರಣಾ ಕಟ್ಟಡ ‘ಕ್ಷೀರ ಧಾರೆ‘ ಯ ಉದ್ಘಾಟನಾ ಸಮಾರಂಭವು ಜೂ.29 ರಂದು ಜರುಗಿತು.
ನೂತನ ಕಟ್ಟಡವನ್ನು ಶಾಸಕ ಹರೀಶ್ ಪೂಂಜ ಉದ್ಘಾಟಿಸಿ, ಶುಭ ಹಾರೈಸಿದರು. ದ.ಕ ಹಾಲು ಒಕ್ಕೂಟದ ನಿರ್ದೇಶಕ ಪದ್ಮನಾಭ ಶೆಟ್ಟಿ ಅರ್ಕಜೆ, ಶಿರ್ಲಾಲು ಹಾಲು ಉತ್ಪಾದಕರ ಸಂಘದ ಅಧ್ಯಕ್ಷ ಮಾಧನ ಕುಲಾಲ್, ಉಪಾಧ್ಯಕ್ಷ ಬಾಲಕೃಷ್ಣ, ಶಿರ್ಲಾಲು ಗಾ.ಪಂ.ಅಧ್ಯಕ್ಷೆ ಶಶಿಕಲಾ, ಸುಲ್ಕೇರಿಮೊಗ್ರು ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಕೃಷ್ಣಪ್ಪ ಕೋಟ್ಯಾನ್, ಕಾರ್ಯನಿರ್ವಹಣಾಧಿಕಾರಿ ನಿತ್ಯಾನಂದ ಶೆಟ್ಡಿ ನೊಚ್ಚ ಮತ್ತಿತರ ಗಣ್ಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.