ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಪ್ರತಿಭಾ ಪುರಸ್ಕಾರ-ಸಾಧಕರಿಗೆ ಸನ್ಮಾನ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಇದರ ನೇತೃತ್ವದಲ್ಲಿ ಎಸ್.ಎಸ್.ಎಲ್.ಸಿ ಮತ್ತು ದ್ವಿತೀಯ ಪಿ.ಯು.ಸಿ ಪರೀಕ್ಷೆಯಲ್ಲಿ ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ ಹಾಗೂ ಕ್ರೀಡಾ ಕ್ಷೇತ್ರದಲ್ಲಿ ವಿಶೇಷ ಸಾಧನೆ ಮಾಡಿದ ಸಮಾಜದ ವಿದ್ಯಾರ್ಥಿಗಳಿಗೆ ` ಪ್ರತಿಭಾ ಪುರಸ್ಕಾರ ಹಾಗೂ ಸನ್ಮಾನ ಸಮಾರಂಭಜೂ.30ರಂದು ವಾಣಿ ಶಿಕ್ಷಣ ಸಂಸ್ಥೆಗಳ ಸಭಾಭವನದಲ್ಲಿ  ಜರುಗಿತು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಹಾವೇರಿ ಜಾನಪದ ವಿಶ್ವವಿದ್ಯಾಲಯದ ವಿಶ್ರಾಂತ ಉಪಕುಲಪತಿ  ಡಾ. ಕೆ. ಚಿನ್ನಪ್ಪ ಗೌಡ ಭಾಗವಹಿಸಿದ್ದರು. ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಅಧ್ಯಕ್ಷ ಜಿ. ಸೋಮೇ ಗೌಡ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ಸಂಘದ ಗೌರವಾಧ್ಯಕ್ಷ ಹೆಚ್. ಪದ್ಮಗೌಡ ಉಪಾಧ್ಯಕ್ಷರಾದ ನ್ಯಾಯವಾದಿ ರಾಮಚಂದ್ರ ಗೌಡ, ನಾರಾಯಣ ಗೌಡ, ಜೊತೆ ಕಾರ್ಯದರ್ಶಿ ಗಣೇಶ್ ಗೌಡ, ಕೋಶಾಧಿಕಾರಿ ರಾಜೀವ ಗೌಡ, ಮಹಿಳಾ ವೇದಿಕೆ ಅಧ್ಯಕ್ಷೆ ಶೋಭಾ ನಾರಾಯಣ ಗೌಡ, ಯುವ ವೇದಿಕೆ ಅಧ್ಯಕ್ಷ ಯಶವಂತ ಬಿ.ಟಿ ಉಪಸ್ಥಿತರಿದ್ದರು.

ಗ್ರೀಷ್ಮಾ ಮತ್ತು ಬಳಗ ಪ್ರಾರ್ಥನೆ ಹಾಡಿದರು. ಸಂಘದ ಕಾರ್ಯದರ್ಶಿ ಮೋಹನ ಗೌಡ ಸ್ವಾಗತಿಸಿದರು. ಅಧ್ಯಾಪಕರಾದ ಶ್ರೀಮತಿ ವಿದ್ಯಾ, ಮಹಾಬಲ ಗೌಡ, ಉಪನ್ಯಾಸಕ ಬೆಳಿಯಪ್ಪ ಕೆ. ವಿವಿಧ ಕಾರ್ಯಕ್ರಮಗಳನ್ನು ನಿರ್ವಹಿಸಿದರು. ಉಪನ್ಯಾಸಕಿ ಮೀನಾಕ್ಷಿ ಎನ್. ಕಾರ್ಯಕ್ರಮ ನಿರೂಪಿಸಿ, ಸಂಘದ ಜೊತೆ ಕಾರ್ಯದರ್ಶಿ ಗಣೇಶ್ ಗೌಡ ವಂದಿಸಿದರು.

ವಿವಿಧ ಕ್ಷೇತ್ರಗಳ ಸಾಧಕರಿಗೆ ಸನ್ಮಾನ
ಸಮಾರಂಭದಲ್ಲಿ ಸಾಧಕರಾದ ಶ್ರೀ ದುರ್ಗಾಪರಮೇಶ್ವರೀ ಯಕ್ಷಗಾನ ಕಲಾ ಮಂಡಳಿ ಕಟೀಲಿನ ಭಾಗವತ ಶ್ರೀನಿವಾಸ ಗೌಡ ಬಳ್ಳಮಂಜ, ಇಂಡೋ ಇಂಟರ್‌ನ್ಯಾಷನಲ್ ಪ್ರಿಮಿರ್ ಕಬಡ್ಡಿ ಲೀಗ್‌ನ ಆಟಗಾರ ಕೌಶಿಕ್ ಹೆಚ್. ಗೌಡ ಹಟ್ಟತ್ತೋಡಿ ಪುಂಜಾಲಕಟ್ಟೆ, ಸುರತ್ಕಲ್ ಎನ್‌ಐಟಿಕೆ ಇಂಜಿನಿಯರಿಂಗ್ ಕಾಲೇಜಿನ ೨೦೧೭-೧೮ನೇ ಸಾಲಿನ ನ್ಯಾನೋ ಟೆಕ್ನೋಲೋಜಿ ಸ್ನಾತಕೋತ್ತರ ಪದವಿಯಲ್ಲಿ ಪ್ರಥಮ ರ್‍ಯಾಂಕ್ ಗಳಿಸಿ ಬಂಗಾರದ ಪದಕ ಪಡೆದ ಪ್ರಜ್ವಲ್ ಗೌಡ ಕೆ. ಇವರನ್ನು ಗೌರವಿಸಲಾಯಿತು. ತ್ರೋ ಬಾಲ್‌ನಲ್ಲಿ ಕರ್ನಾಟಕ ತಂಡವನ್ನು ಪ್ರತಿನಿಧಿಸಿದ ಭರತೇಶ್ ಬಂದಾರು ಇವರನ್ನು ವಿಶೇಷವಾಗಿ ಸನ್ಮಾನಿಸಲಾಯಿತು. ನೋಟರಿ ವಕೀಲರಾಗಿ ನೇಮಕಗೊಂಡ ಗಣೇಶ್ ಗೌಡರನ್ನು ವಿಶೇಷವಾಗಿ ಅಭಿನಂದಿಸಲಾಯಿತು.

ವಿದ್ಯಾರ್ಥಿ ಪ್ರತಿಭಾ ಪುರಸ್ಕಾರ
ಕಳೆದ ಸಾಲಿನ ಎಸ್ಸೆಸ್ಸೆಲ್ಸಿಯಲ್ಲಿ ಶೇ 90ಕ್ಕಿಂತ ಅಂಕ ಗಳಿಸಿದ ವಿದ್ಯಾರ್ಥಿಗಳನ್ನು ಹಾಗೂ ದ್ವಿತೀಯ ಪಿಯುಸಿಯಲ್ಲಿ ಶೇ 85ಕ್ಕಿಂತ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೆರವೇರಿಸಲಾಯಿತು. ಕ್ರೀಡೆ ಮತ್ತು ಸಾಂಸ್ಕೃತಿಕ ಕ್ಷೇತ್ರದಲ್ಲಿ ವಿಶೇಷ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಗುರುತಿಸಿ ಗೌರವಿಸಲಾಯಿತು. ಪ್ರತಿಭಾ ಪುರಸ್ಕಾರ ಸ್ವೀಕರಿಸಿದ ವಿದ್ಯಾರ್ಥಿಗಳ ಪರವಾಗಿ ಡಿ.ಎಂ ದೀಕ್ಷಾ ವಾಣಿ ಸ್ಕೂಲ್ ಹಾಗೂ ತೇಜಶ್ರೀ ಗೋಪಾಲ ಗೌಡ ವಾಣಿ ಕಾಲೇಜು ಅನಿಸಿಕೆ ವ್ಯಕ್ತಪಡಿಸಿದರು.

 

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.