ಮಡಂತ್ಯಾರು: ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

ಮಡಂತ್ಯಾರು: ದುಶ್ಚಟಗಳು ಕೆಟ್ಟ ನಂಬಿಕೆ ಆಕರ್ಷಣೆ ಸಹವಾಸ ದೋಷದಿಂದ ಬರುತ್ತದೆ. ಕ್ಷುಲ್ಲಕ ಕಾರಣಕ್ಕಾಗಿ ಕ್ಷಣಿಕ ನಿರ್ಧಾರ ತೆಗೆದುಕೊಳ್ಳುವ ಮೂಲಕ ಶಾಶ್ವತ ಜೀವನವನ್ನು ವ್ಯಸನಿಗಳಾಗಿ ಹಾಳು ಮಾಡಿಕೊಳ್ಳುತ್ತಿದ್ದಾರೆ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ನಿರ್ದೇಶಕ,ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಕಾರ್ಯದರ್ಶಿ ವಿವೇಕ್ .ವಿ.ಪಾಯಿಸ್ ಹೇಳಿದರು.
ಮಡಂತ್ಯಾರು ಸೇಕ್ರೆಡ್ ಹಾರ್ಟ್ ಪದವಿ ಪೂರ್ವ ಕಾಲೇಜಿನ ಸಭಾಂಗಣದಲ್ಲಿ ಕಾಲೇಜು ಮತ್ತು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿಯೋಜನೆ ಬೆಳ್ತಂಗಡಿ ಇದರ ಸಹಯೋಗದಲ್ಲಿ ವಿಶ್ವ ಮಾದಕ ವಸ್ತು ವಿರೋಧಿ ದಿನಾಚರಣೆಯ ಪ್ರಯುಕ್ತ ನಡೆದ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮದಲ್ಲಿ ಅವರು ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದರು.
ಮಾದಕ ವಸ್ತುಗಳು ಮನಸ್ಸನ್ನು ಕೊಲ್ಲುತ್ತದೆ. ಮಾದಕ ವ್ಯಸನಿಗಳಿಗೆ ಸಮಾಜವು ಮನ್ನಣೆ ನೀಡುವುದಿಲ್ಲ ,ಇಂದು ಯುವಜನತೆ ಮಾದಕ ವಸ್ತುಗಳ ಚಟಕ್ಕೆ ಬೀಳುತ್ತಿದ್ದಾರೆ.ಎಲ್ಲಾ ಧರ್ಮಗಳು ಮಾದಕವಸ್ತುಗಳ ಬಳಕೆಯನ್ನು ಖಂಡಿಸುತ್ತವೆ.ಯುವಜನತೆ ಮಾದಕವಸ್ತುಗಳಿಗೆ ಬಲಿಯಾಗದೆ ಶಿಕ್ಷಣದ ಜೊತೆಗೆ ಉತ್ತಮ ಚಾರಿತ್ರ್ಯ ಬೆಳೆಸಿಕೊಳ್ಳಿ ಎಂದು ಅವರು ವಿದ್ಯಾರ್ಥಿಗಳಿಗೆ ಕಿವಿ ಮಾತು ಹೇಳಿದರು.
ಕಾಲೇಜಿನ ಪ್ರಾಂಶುಪಾಲ  ವಂ|ಫಾ|ಜೆರೋಮ್ ಡಿಸೋಜ ಪ್ರಾಸ್ತಾವಿಕವಾಗಿ ಮಾತನಾಡಿದರು. ಜನಜಾಗೃತಿ ವೇದಿಕೆಯ ಯೋಜನಾಧಿಕಾರಿ ಚೆನ್ನಪ್ಪ ಗೌಡ, ಮಡಂತ್ಯಾರು ವಲಯದ ಮೇಲ್ವಿಚಾರಕ ಸಚಿನ್, ಉಪನ್ಯಾಸಕ ವೃಂದದವರು ಉಪಸ್ಥಿತರಿದ್ದರು. ಉಪನ್ಯಾಸಕ ಲಿಯೋ ನರೋನ್ಹ ಕಾರ್ಯಕ್ರಮ ನಿರ್ವಹಿಸಿದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.