ಮಂಗಳೂರಿನಲ್ಲಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಮ್ಮೇಳನ

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಮ್ಮೇಳನವು ಇಂದು(ಜು.1) ಮಂಗಳೂರಿನ ಪುರಭವನದಲ್ಲಿ ಜರುಗಿತು.

ಹಿರಿಯ ಪತ್ರಕರ್ತ ಈಶ್ವರ್ ದೈತೋಟ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಸಮ್ಮೇಳನವನ್ನು ನಾಗಾಲ್ಯಾಂಡ್ ರಾಜ್ಯಪಾಲ ಪಿ.ಬಿ ಆಚಾರ್ಯ ಉದ್ಘಾಟಿಸಿದರು.

ಜಿಲ್ಲಾ ಮಟ್ಟದ ಪತ್ರಕರ್ತರ ಸಮ್ಮೇಳನದ ಅಂಗವಾಗಿ ಏರ್ಪಡಿಸಿದ ಚಿತ್ರಕಲಾ ಪ್ರದರ್ಶನವನ್ನು ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ.ಖಾದರ್ ಚಿತ್ರ ಬಿಡಿಸುವ ಮೂಲಕ ಉದ್ಘಾಟಿಸಿದರು.

 

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ದ.ಕ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ ಖಾದರ್, ಮಂಗಳೂರು ಉತ್ತರ ಕ್ಷೇತ್ರದ ಶಾಸಕ ಡಾ| ವೈ. ಭರತ್ ಶೆಟ್ಟಿ, ಜಿ.ಪಂ ಮುಖ್ಯಕಾರ್ಯನಿರ್ವಹಣಾಧಿಕಾರಿ ಡಾ| ಸೆಲ್ವಮಣಿ ಆರ್, ಬೆಂಗಳೂರು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು, ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ, ಕವಿತಾ ಪಿ.ಬಿ ಆಚಾರ್ಯ, ಜಿಲ್ಲಾ ಪೊಲೀಸ್ ಅಧೀಕ್ಷಕ ಬಿ.ಎಂ ಲಕ್ಷ್ಮೀ ಪ್ರಸಾದ್, ಮಂಗಳೂರು ಪತ್ರಿಕಾಭವನ ಟ್ರಸ್ಟ್ ಅಧ್ಯಕ್ಷ ಕೆ.ಆನಂದ ಶೆಟ್ಟಿ, ಮಂಗಳೂರು ಪ್ರೆಸ್‌ಕ್ಲಬ್ ಅಧ್ಯಕ್ಷ ಅನ್ನು ಮಂಗಳೂರು, ಎಂ.ಎಸ್.ಇ.ಝಡ್‌ನ ಸಾರ್ವಜನಿಕ ಸಂಪರ್ಕ ಅಧಿಕಾರಿ ರಾಮಚಂದ್ರ ಭಂಡಾರ್ಕರ್, ಸಮ್ಮೇಳನದ ಸಂಚಾಲಕ ಹಾಗೂ ರಾಜ್ಯ ಕಾರ್ಯಕಾರಿಣಿ ಸದಸ್ಯ ಜಗನ್ನಾಥ ಶೆಟ್ಟಿ ಬಾಳ, ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಕಾರ್ಯದರ್ಶಿ ಇಬ್ರಾಹಿಂ ಅಡ್ಕಸ್ಥಳ, ಸುದ್ದಿಬಿಡುಗಡೆ ಪತ್ರಿಕೆ ಸಂಪಾದಕ ಯು.ಪಿ ಶಿವಾನಂದ, ಹಿರಿಯ ಪತ್ರಕರ್ತ ಮನೋಹರ್ ಪ್ರಸಾದ್ ಮತ್ತಿತರ ಗಣ್ಯರು, ಪತ್ರಕರ್ತರು ಸಮ್ಮೇಳನದಲ್ಲಿ ಭಾಗವಹಿಸಿದ್ದರು.

ಈ ಸಂದರ್ಭದಲ್ಲಿ 30 ವರ್ಷಗಳಿಂದ  ಗಣನೀಯ ಸೇವೆ ಸಲ್ಲಿಸಿದ ಹಿರಿಯ ಪತ್ರಕರ್ತರನ್ನು ವೇದಿಕೆಯಲ್ಲಿ ಗಣ್ಯರ ಸಮ್ಮುಖ ಸನ್ಮಾನಿಸಿ ಗೌರವಿಸಲಾಯಿತು.

ಕುತ್ಲೂರು ಶಾಲೆಗೆ ಕಂಪ್ಯೂಟರ್ ಕೊಡುಗೆ:
ಪತ್ರಕರ್ತರ ಸಂಘದ ವತಿಯಿಂದ ಕಳೆದ ಡಿಸೆಂಬರ್ ತಿಂಗಳಲ್ಲಿ ಗ್ರಾಮ ವಾಸ್ತವ್ಯ ನಡೆಸಿದ ಬೆಳ್ತಂಗಡಿ ತಾಲೂಕಿನ ಕುತ್ಲೂರು ಸರಕಾರಿ ಶಾಲೆಗೆ ಮಂಗಳೂರು ವಿಶೇಷ ಆರ್ಥಿಕ ವಲಯದ ವತಿಯಿಂದ ನೀಡಿದ ಕಂಪ್ಯೂಟರ್ ನ ದಾಖಲೆಗಳನ್ನು ನಾಗಾಲ್ಯಾಂಡ್ ರಾಜ್ಯಪಾಲ ಪಿ.ಬಿ.ಆಚಾರ್ಯ ಕುತ್ಲೂರು ಶಾಲೆಯ ಮುಖ್ಯೋಪಾಧ್ಯಾಯರಿಗೆ ಹಸ್ತಾಂತರಿಸಿದರು. 

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.