ಬೆಳ್ತಂಗಡಿ ರಿಷಿ ಸಾಮಾಜಿಕ ಸಾಂಸ್ಕೃತಿಕ ಪ್ರತಿಷ್ಠಾನ ವತಿಯಿಂದ ವೈದ್ಯರಿಗೆ ಸನ್ಮಾನ

ಬಂದಾರು: ರಿಷಿ ಸಾಮಾಜಿಕ ಸಾಂಸ್ಕೃತಿಕ ಪ್ರತಿಷ್ಠಾನ ಬೆಳ್ತಂಗಡಿ ಇದರ ವತಿಯಿಂದ ವೈದ್ಯರ ದಿನಾಚರಣೆ ಅಂಗವಾಗಿ ಕಳೆದ 31 ವರ್ಷಗಳಿಂದ ನಿಸ್ವಾರ್ಥ ಸೇವೆ ಸಲ್ಲಿಸುತ್ತಿರುವ ವೈದ್ಯ ಮುರ್ಗಜೆ ಡಾ| ವೆಂಕಟ್ರಮಣ ಭಟ್ ಅವರನ್ನು ಮೈರೋಳ್ತಡ್ಕ ಸರ್ಕಾರಿ ಹಿ.ಪ್ರಾ.ಶಾಲೆಯಲ್ಲಿ ಸನ್ಮಾನಿಸಲಾಯಿತು.
ಸಂಗಬೆಟ್ಟು ಕ್ಷೇತ್ರದ ಜಿ.ಪಂ ಸದಸ್ಯ ತುಂಗಪ್ಪ ಬಂಗೇರ ಸನ್ಮಾನ ನೆರವೇರಿಸಿ ಮಾತನಾಡಿ ಕುಗ್ರಾಮದಲ್ಲಿ ವೈದ್ಯರೇ ಇಲ್ಲದ ಕಾಲದಲ್ಲಿ ವೈದ್ಯಕೀಯ ಸೇವೆ ಆರಂಭಿಸಿ ಸಾವಿರಾರು ರೋಗಿಗಳ ಜೀವ ಕಾಪಾಡಿದ ಡಾ| ವೆಂಕಟ್ರಮಣ ಭಟ್ ಅವರ ಸೇವೆ ಅನನ್ಯ ಎಂದರು.
ಸನ್ಮಾನ ಸ್ವೀಕರಿಸಿ ಮಾತನಾಡಿದ ಡಾ| ವೆಂಕಟ್ರಮಣ ಭಟ್, ವೈದ್ಯರ ದಿನಾಚರಣೆ ಸಂದರ್ಭ ತನ್ನ ಸೇವೆಯನ್ನು ಗುರುತಿಸಿ ಸನ್ಮಾನಿಸಿರುವುದು ಸಂತೋಷ ಉಂಟು ಮಾಡಿದೆ ಎಂದರು.
ಉಮಾಮಹೇಶ್ವರ ದೇವಸ್ಥಾನದ ಆಡಳಿತ ಮೊಕ್ತೇಸರ ಚಿದಾನಂದ ರಾವ್ ಕೊಲ್ಲಾಜೆ ಅಧ್ಯಕ್ಷತೆ ವಹಿಸಿದ್ದರು. ತಾ.ಪಂ. ಸದಸ್ಯ ಕೃಷ್ಣಯ್ಯ ಆಚಾರಿ, ಗ್ರಾ.ಪಂ. ಸದಸ್ಯ ಸೀತಾರಾಮ ಮಡಿವಾಳ, ಪ್ರತಿಷ್ಠಾನದ ಅಧ್ಯಕ್ಷ ದಿವಾಕರ ಪದ್ಮುಂಜ, ಆನಂದ ಪದ್ಮುಂಜ, ರೂಪಾ ಜೆ ಪಡ್ಪು, ಸಂಧ್ಯಾ ಆನಂದ್, ಕೀರ್ತನಾ ಕುಲಾಲ್, ಅವಿನಾಶ್ ಕುಲಾಲ್, ಧನ್ಯ ಅಡ್ತಲೆ ಮೊದಲಾದವರು ಉಪಸ್ಥಿತರಿದ್ದರು.
ಪ್ರತಿಷ್ಠಾನದ ಪ್ರಧಾನ ಕಾರ್ಯದರ್ಶಿ ವಿಶ್ವನಾಥ ಪದ್ಮುಂಜ ಸ್ವಾಗತಿಸಿ, ಶಾಲಾ ಮುಖ್ಯ ಶಿಕ್ಷಕಿ ಚಂದ್ರಾವತಿ ಕೆ ವಂದಿಸಿ, ಪೃಥ್ವಿ ಜೆ ಪಡ್ಪು ಸನ್ಮಾನಪತ್ರ ವಾಚಿಸಿದರು. ದೇವಿಕಾ ಸುಳ್ಯ ಕಾರ್ಯಕ್ರಮ ನಿರೂಪಿಸಿದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.