HomePage_Banner_
HomePage_Banner_
HomePage_Banner_

ಧರ್ಮಸ್ಥಳ ಸಹಕಾರಿ ಸಂಘದಲ್ಲಿ ಕೃಷಿ ಮಾಹಿತಿ ಶಿಬಿರ

Advt_NewsUnder_1

ಧರ್ಮಸ್ಥಳ : ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ನಿಯಮಿತ ಧರ್ಮಸ್ಥಳ ಮತ್ತು ಜಿಲ್ಲಾ ಕೃಷಿ ತರಬೇತಿ ಕೇಂದ್ರ ಮಂಗಳೂರು ಇದರ ಸಹಭಾಗಿತ್ವದಲ್ಲಿ ರೈತರಿಗೆ ಒಂದು ದಿನದ ಹೊರಾಂಗಣ ಕೃಷಿ ತರಬೇತಿ ಅಂಗವಾಗಿ ಜು.9ರಂದು ಧರ್ಮಸ್ಥಳ ಪ್ರಾ.ಕೃ.ಪತ್ತಿನ ಸಹಕಾರಿ ಸಂಘದ ಅಟಲ್‌ಜೀ ಸಭಾಭವನದಲ್ಲಿ ಕೃಷಿ ತರಬೇತಿ ನಡೆಯಿತು.

ಪ್ರಗತಿಪರ ಕೃಷಿಕ ಪ್ರಭಾಕರ ಮಯ್ಯ ತರಬೇತಿಯನ್ನು ದೀಪ ಬೆಳಗಿಸಿ ಉದ್ಘಾಟಿಸಿ ತರಕಾರಿ, ಭತ್ತದ ಕೃಷಿ, ಶೂನ್ಯ ಬಂಡವಾಳದಲ್ಲಿ ಕೃಷಿ ಮಾಡುವ ಬಗ್ಗೆ ರೈತರಿಗೆ ತರಬೇತಿ ನೀಡಿದರು.
ಜಿಲ್ಲಾ ಕೃಷಿ ತರಬೇತಿ ಕೇಂದ್ರ ಬೆಳ್ತಂಗಡಿ ಇದರ ಸಹಕಾರ ಕೃಷಿ ನಿರ್ದೇಶಕಿ ಶೈಲಜಾ ಎನ್ ಪ್ರಾಸ್ತಾವಿಕವಾಗಿ ಮಾತನಾಡಿ ವಿವಿಧ ಕೃಷಿಯ ಬಗ್ಗೆ ಮಾಹಿತಿ ನೀಡಿದರು. ಸಮಾರಂಭದ ಅಧ್ಯಕ್ಷತೆಯನ್ನು ಧರ್ಮಸ್ಥಳ ಪ್ರಾ.ಕೃ.ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಹರಿದಾಸ್ ಗಾಂಭೀರ ಅಧ್ಯಕ್ಷತೆ ವಹಿಸಿದ್ದರು.
ಅಳದಂಗಡಿ ರೈತ ಉತ್ಪಾದಕರ ಸಂಸ್ಥೆಯ ಸಂಯೋಜಕಿ ಸುಕನ್ಯಾ, ಸಹಾಯಕ ಕೃಷಿ ಅಧಿಕಾರಿ ಚಿದಾನಂದ ಹೂಗಾರ್, ವಿಟ್ಲ ಕೃಷಿ ವಿಜ್ಞಾನ ಕೇಂದ್ರದ ಕೃಷಿ ವಿಜ್ಞಾನಿ ಡಾ| ಮಲ್ಲಿಕಾರ್ಜುನ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿ ಮಾಹಿತಿ ನೀಡಿದರು. ಧರ್ಮಸ್ಥಳ ಪ್ರಾ.ಕೃ.ಪತ್ತಿನ ಸಹಕಾರ ಸಂಘದ ನಿರ್ದೇಶಕ ಜಯರಾಮ ಭಂಡಾರಿ, ಉಮಾನಾಥ, ಸಂಘದ ಮುಖ್ಯಕಾರ್ಯನಿರ್ವಹಣಾಧಿಕಾರಿ  ರವೀಂದ್ರ ಡಿ , ಸಿಬ್ಬಂದಿವರ್ಗ , ಸದಸ್ಯರು ಉಪಸ್ಥಿತರಿದ್ದರು.

Advt_NewsUnder_2
Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.