ಮಡಂತ್ಯಾರು: ಮಡಂತ್ಯಾರು ಗ್ರಾಮ ಪಂಚಾಯತದ 2019-20ನೇ ಸಾಲಿನ ಪ್ರಥಮ ಸುತ್ತಿನ ಗ್ರಾಮಸಭೆಯು ಗ್ರಾ.ಪಂ.ಅಧ್ಯಕ್ಷ ಗೋಪಾಲಕೃಷ್ಣ ಕೆ ರವರ ಅಧ್ಯಕ್ಷತೆಯಲ್ಲಿ ಇಂದು(ಜು.11) ಮಡಂತ್ಯಾರು ಗ್ರಾ.ಪಂ ಸಭಾಭವನದಲ್ಲಿ ಜರುಗಿತು.
ಮಾರ್ಗದರ್ಶಿ ಅಧಿಕಾರಿಯಾಗಿ ತೋಟಗಾರಿಕಾ ಸಹಾಯಕ ನಿರ್ದೇಶಕ ಶಿವಪ್ರಕಾಶ್ ಗ್ರಾಮಸಭೆಯ ನೇತೃತ್ವ ವಹಿಸಿದ್ದರು. ಜಿ.ಪಂ. ಸದಸ್ಯೆ ಮಮತಾ ಎಂ ಶೆಟ್ಟಿ, ತಾಲೂಕು ಪಂಚಾಯತ್ ಸದಸ್ಯೆ ವಸಂತಿ ಲಕ್ಷ್ಮಣ್, ಗ್ರಾ.ಪಂ.ಉಪಾಧ್ಯಕ್ಷೆ ಜಯಂತಿ.ಪಿ ಹಾರಬೆ, ಗ್ರಾ.ಪಂ ಸದಸ್ಯರು, ವಿವಿಧ ಇಲಾಖಾ ಅಧಿಕಾರಿಗಳು, ಪಂಚಾಯತ್ ಅಭಿವೃದ್ಧಿ ಅಧಿಕಾರಿ ನಾಗೇಶ್, ಗ್ರಾ.ಪಂ ಸಿಬ್ಬಂದಿ ವರ್ಗ ಹಾಗೂ ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಮಸಭೆಯಲ್ಲಿ ಭಾಗವಹಿಸಿದ್ದರು.