ನಿಡ್ಲೆ: ಸ್ವಚ್ಛ ಮೇವ ಜಯತೇ ಆಂದೋಲನ ಸಮಾರೋಪ

Advt_NewsUnder_1
Advt_NewsUnder_1
Advt_NewsUnder_1

ನಿಡ್ಲೆ: ಇಲ್ಲಿಯ ನಿಡ್ಲೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಒಂದು ತಿಂಗಳ ಕಾಲ ನಡೆದ ಸ್ವಚ್ಛ ಮೇವ ಜಯತೇ ಆಂದೋಲನ ಕಾರ್ಯಕ್ರಮದ ಸಮಾರೋಪ ಸಮಾರಂಭವು ಜು.10 ರಂದು ಗ್ರಾ.ಪಂ. ಕಛೇರಿಯಲ್ಲಿ ನಡೆಯಿತು.
ಗ್ರಾ.ಪಂ. ಅಧ್ಯಕ್ಷೆ ಶ್ರೀಮತಿ ಶುಭಾ ದೇವಧರ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಜಿ.ಪಂ.ಸದಸ್ಯ ಕೊರಗಪ್ಪ ನಾಯ್ಕ ಮಾತನಾಡಿ, ಗ್ರಾಮ ಪಂಚಾಯತು ವ್ಯಾಪ್ತಿಯಲ್ಲಿ ಪ್ಲಾಸ್ಟಿಕ್ ಬಳಕೆಯನ್ನು ಕಡಿಮೆ ಮಾಡಿ ಆರೋಗ್ಯವಂತ ವಾತಾವರಣವನ್ನು ನಿರ್ಮಾಣ ಮಾಡಲು ಜನರು ಸಹಕರಿಸಬೇಕು ಹಾಗೂ ಹೆಚ್ಚಿನ ಸಂಖ್ಯೆಯಲ್ಲಿ ನೀರಿಂಗಿಸುವ ಕಾರ್ಯಕ್ರಮಗಳನ್ನು ಕೈಗೊಂಡು ಪ್ರತಿಯೊಬ್ಬರೂ ಜಲಸಂರಕ್ಷಣೆಯ ಜವಾಬ್ದಾರಿಯನ್ನು ನಿರ್ವಹಿಸಬೇಕೆಂದು ಕರೆನೀಡಿದರು.
ಅಭಿವೃದ್ದಿ ಅಧಿಕಾರಿ ಗಾಯತ್ರಿ ಪಿ ಸ್ವಚ್ಛತೆ, ಉದ್ಯೋಗ ಖಾತ್ರಿ ಯೋಜನೆ, ಜಲಸಂರಕ್ಷಣೆ ಮೊದಲಾದ ವಿಷಯಗಳ ಬಗ್ಗೆ ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ಸ್ವಚ್ಛ ಮೇವ ಜಯತೇ ಅಂಗವಾಗಿ ನಡೆಸಲಾದ ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ಗ್ರಾ.ಪಂ.ಉಪಾಧ್ಯಕ್ಷ ರುಕ್ಮಯ್ಯ ಪೂಜಾರಿ, ಕಾರ್ಯದರ್ಶಿ ಶ್ರವಣ್ ಕುಮಾರ್, ಗ್ರಾ.ಪಂ.ಸದಸ್ಯರು, ಶಾಲಾ ಮುಖ್ಯೋಪಾಧ್ಯಾಯರು, ಶಿಕ್ಷಕರು, ವಿದ್ಯಾರ್ಥಿಗಳು, ಹೆತ್ತವರು, ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತೆಯರು, ಆರೋಗ್ಯ ಸಹಾಯಕರು ಉಪಸ್ಥಿತರಿದ್ದರು. ಗ್ರಾ.ಪಂ.ಸಿಬ್ಬಂದಿ ಉಷಾ ಕಾರ್ಯಕ್ರಮ ನಿರೂಪಿಸಿ, ಕಾರ್ಯದರ್ಶಿ ಶ್ರವಣ್ ಕುಮಾರ್ ಸ್ವಾಗತಿಸಿ, ವಂದಿಸಿದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.