HomePage_Banner_
HomePage_Banner_
HomePage_Banner_
HomePage_Banner_
HomePage_Banner_

ಅಪ್ರಾಪ್ತ ಬಾಲಕಿ ಲೈಂಗಿಕ ದೌರ್ಜನ್ಯ ಪ್ರಕರಣ: ಆರೋಪಿ ಬಂಧನ

ಧರ್ಮಸ್ಥಳ: ಅಪ್ರಾಪ್ತ ಬಾಲಕಿಯೋರ್ವಳ ಮೇಲೆ ಲೈಂಗಿಕ ದೌರ್ಜನ್ಯವೆಸಗಿರುವ ಆರೋಪದಡಿ ಧರ್ಮಸ್ಥಳ ಅಶೋಕನಗರ ನಿವಾಸಿ ಅಶ್ವಥ್ ಎಂಬವರ ವಿರುದ್ಧ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪೊಲೀಸರು ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ಆರೋಪಿ ಅಶ್ವತ್ಥ್ ಬಾಲಕಿಯ ಸ್ನೇಹಿತನಾಗಿದ್ದು, ಆಕೆ ಮನೆಯಲ್ಲಿದ್ದ ವೇಳೆ ಆಕೆಯನ್ನು ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿದ್ದನು. ನಂತರ ಗರ್ಭಿಣಿಯಾಗಿದ್ದ ಆಕೆ ಆತನನ್ನು ಮದುವೆಯಾಗುವಂತೆ ಒತ್ತಾಯಿಸಿದ್ದು, ಆತ ತನ್ನನ್ನು ಕೊಲೆಮಾಡುವುದಾಗಿ ಜೀವ ಬೆದರಿಕೆ ಒಡ್ಡಿದ್ದಾನೆ ಎಂದು ಬಾಲಕಿ ಧರ್ಮಸ್ಥಳ ಪೊಲೀಸ್ ಠಾಣೆಗೆ ದೂರು ನೀಡಿದ್ದಳು. ಈ ಹಿನ್ನೆಲೆಯಲ್ಲಿ ಪೊಲೀಸರು ಆರೋಪಿಯನ್ನು ಬಂಧಿಸಿ, ಫೋಕ್ಸೋ ಕಾಯಿದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.