ಶ್ರೀ ಗುರುದೇವ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿ ಸಂಘದ ಉದ್ಘಾಟನೆ

 ಬೆಳ್ತಂಗಡಿ: ಇಲ್ಲಿಯ ಶ್ರೀ ಗುರುದೇವ ಪದವಿ ಪೂರ್ವ ಕಾಲೇಜಿನ 2019-20ನೇ ಶೈಕ್ಷಣಿಕ ಸಾಲಿನ ವಿದ್ಯಾರ್ಥಿ ಸಂಘದ ಉದ್ಘಾಟನಾ ಕಾರ್ಯಕ್ರಮವು ಇಂದು (ಜು.13) ಕಾಲೇಜು ಆವರಣದಲ್ಲಿ ಜರುಗಿತು.
ಉಜಿರೆ ಎಸ್‌ಡಿಎಂ ಕಾಲೇಜಿನ ಪ್ರಾಂಶುಪಾಲ ಡಾ| ಟಿ. ಕೃಷ್ಣಮೂರ್ತಿ ಕಾರ್ಯಕ್ರಮ ಉದ್ಘಾಟಿಸಿ ವಿದ್ಯಾರ್ಥಿಗಳಿಗೆ ಶುಭಹಾರೈಸಿದರು.

ಮಾಜಿ ಶಾಸಕ ಹಾಗೂ ಸಂಸ್ಥೆಯ ಅಧ್ಯಕ್ಷ ಕೆ.ವಸಂತ ಬಂಗೇರ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ಕಾರ್ಯಕ್ರಮದಲ್ಲಿ ಶ್ರೀ ಗುರುದೇವ ಎಜುಕ್ಯೇಶನ್ ಟ್ರಸ್ಟ್ ಉಪಾಧ್ಯಕ್ಷ ಪದ್ಮನಾಭ ಮಾಣಿಂಜ, ಟ್ರಸ್ಟ್ ಸದಸ್ಯ ಎಸ್.ಪಿ ಪೀತಾಂಬರ ಹೇರಾಜೆ, ಪ್ರಾಂಶುಪಾಲ ಡಾ| ಮೋಹನ ಗೌಡ ಹೆಚ್, ವಿದ್ಯಾರ್ಥಿ ಸಂಘದ ಪದಾಧಿಕಾರಿಗಳು, ವಿದ್ಯಾರ್ಥಿಗಳು ಭಾಗವಹಿಸಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.