ತಾಲೂಕು ಆಡಳಿತದಿಂದ “ಹಡಪದ ಅಪ್ಪಣ್ಣ” ಜಯಂತಿ ಆಚರಣೆ

ಬೆಳ್ತಂಗಡಿ: ಸರಕಾರಿ ಆದೇಶದಂತೆ ತಾಲೂಕು ಆಡಳಿತ, ತಾ.ಪಂ ಬೆಳ್ತಂಗಡಿ ಇವರ ಜಂಟಿ ಆಶ್ರಯದಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಸಹಕಾರದೊಂದಿಗೆ ಹಡಪದ ಅಪ್ಪಣ್ಣ ಜಯಂತಿಯನ್ನು ಮಿನಿ ವಿಧಾನ ಸೌಧ ಸಭಾಂಗಣದಲ್ಲಿಇಂದು  (ಜು. 16)  ಆಚರಿಸಲಾಯಿತು.
ಸಮಾರಂಭವನ್ನು ದೀಪ ಬೆಳಗಿ ಉದ್ಘಾಟಿಸಿದ ತಾ.ಪಂ ಅಧ್ಯಕ್ಷೆ ದಿವ್ಯಜ್ಯೋತಿ ಅವರು ಬಳಿಕ ಹಡಪದ ಅಪ್ಪಣ್ಣ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿದರು.
ಸಮಾರಂಭದಲ್ಲಿ ತಾ.ಪಂ ಸ್ಥಾಯಿ ಸಮಿತಿ ಅಧ್ಯಕ್ಷ ವಿ.ಟಿ ಸೆಬಾಸ್ಟಿಯನ್ ಮಾತನಾಡಿದರು.
ವೇದಿಕೆಯಲ್ಲಿ ತಾಲೂಕು ದಂಡಾಧಿಕಾರಿಯೂ ಆಗಿರುವ ತಹಶಿಲ್ದಾರ್ ಗಣಪತಿ ಶಾಸ್ತ್ರಿ, ತಾ.ಪಂ ಕಾರ್ಯನಿರ್ವಹಣಾಧಿಕಾರಿ ಜಯರಾಮ್ ಉಪಸ್ಥಿತರಿದ್ದರು . ಸಮಾರಂಭದಲ್ಲಿ ಜಿ.ಪಂ ಸದಸ್ಯ ಕೆ ಕೊರಗಪ್ಪ ನಾಯ್ಕ, ತಾ.ಪಂ ಸದಸ್ಯರಾದ ಲಕ್ಷ್ಮೀನಾರಾಯಣ ಆಚಾರ್ ಮತ್ತು ಗೋಪಿನಾಥ ನಾಯಕ್, ಸಹಿತ ವಿವಿಧ ಇಲಾಖೆ ಅಧಿಕಾರಿಗಳು, ತಾಲೂಕು ಕಚೇರಿ ಸಿಬ್ಬಂದಿಗಳು ಭಾಗಿಯಾಗಿದ್ದರು.
ತಾ.ಪಂ ಸಂಯೋಜಕ ಜಯಾನಂದ ಲಾಯಿಲ ಸ್ವಾಗತಿಸಿದರು. ಶಿಕ್ಷಣ ಇಲಾಖೆಯ ಸುಭಾಶ್ ಜಾದವ್ ನಿರೂಪಿಸಿದರು. ತಾಲೂಕು ಕಚೇರಿಯ ಶಂಕರ್ ವಂದನಾರ್ಪಣೆಗೈದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.