ಭಾರೀ ಮಳೆಯಾಗುವ ಸಂಭವ: ದ.ಕ ಜಿಲ್ಲೆಯಾದ್ಯಂತ ಶಾಲಾ ಕಾಲೇಜುಗಳಿಗೆ ನಾಳೆ ರಜೆ ಘೋಷಣೆ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಬೆಳ್ತಂಗಡಿ: ಭಾರತೀಯ ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ನಾಳೆ ಭಾರೀ ಮಳೆಯಾಗುವ ಸಂಭವವಿದ್ದು, ಮುಂಜಾಗೃತಾ ಕ್ರಮವಾಗಿ ದ.ಕ.ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ರವರು ನಾಳೆ(ಜು.20) ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿದ್ದಾರೆ.

ದಕ್ಷಿಣಒಳನಾಡಿನಲ್ಲಿ ಜು.20ರಿಂದ22 ರವರೆಗೆ 200mm ಮಳೆಯಾಗುವ ಸಾಧ್ಯತೆ ಇದ್ದು, ಕರಾವಳಿಭಾಗದಲ್ಲಿ ರೆಡ್‌ಅಲರ್ಟ್ ಘೋಷಿಸಿದ ಜಿಲ್ಲಾಡಳಿತ ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಿದೆ. ಅಲ್ಲದೆ ಪ್ರಕೃತಿ ವಿಕೋಪ ಸಂಬಂಧಿಸಿದ ಯಾವುದೇ ಸಮಸ್ಯೆಗಳ ತುರ್ತು ಸೇವೆಗೆ ಟೋಲ್‌ಫ್ರೀ ಸಂಖ್ಯೆ 24X7 ಕಂಟ್ರೋಲ್ ರೂಂ-1077, ವಾಟ್ಸ್‌ಆಪ್ ನಂ: 9483908000 ಸಂಪರ್ಕಿಸುವಂತೆ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಪ್ರಕಟಣೆಯಲ್ಲಿ ತಿಳಿಸಿದೆ.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.