ಕೃಷಿ ಮತ್ತು ಅಭಿವೃದ್ಧಿ ಇಲಾಖೆಗಳ ಸಮಗ್ರ ಕೃಷಿ ಅಭಿಯಾನಕ್ಕೆ ಚಾಲನೆ

ಬೆಳ್ತಂಗಡಿ : ತಾಲೂಕು ಪಂಚಾಯತ್ ಬೆಳ್ತಂಗಡಿ, ಕೃಷಿ ಮತ್ತು ಭೂ ಅಭಿವೃದ್ಧಿ ಇಲಾಖೆ, ವಲಯಾರಣ್ಯ ಇಲಾಖೆ, ರುಡ್‌ಸೆಟ್‌ಉಜಿರೆ ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಕೃಷಿ ಅಭಿವೃದ್ಧಿ ಸಮಗ್ರ ಕೃಷಿ ಅಭಿಯಾನ ಕಾರ್ಯಕ್ರಮವು ಬೆಳ್ತಂಗಡಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಲಾಭವನದಲ್ಲಿ ಇಂದು (ಜು.20)ಜರುಗಿತು.

ಬೆಳ್ತಂಗಡಿ ಕೃಷಿ ನಿರ್ದೇಶಕರ ಕಛೇರಿ ಆವರಣದಲ್ಲಿ ಜಿ.ಪಂ ಸದಸ್ಯೆ ಸೌಮ್ಯಲತಾ ಜಯಂತ ಗೌಡ ರವರು ಸಮಗ್ರ ಕೃಷಿ ಅಭಿಯಾನ ಜಾಥಾಕ್ಕೆ ಹಸಿರು ನಿಶಾನೆ ತೋರಿದರು.

ಈ ಸಂದರ್ಭದಲ್ಲಿ ತಾ.ಪಂ ಅಧ್ಯಕ್ಷೆ ದಿವ್ಯಜ್ಯೋತಿ, ಉಪಾಧ್ಯಕ್ಷೆ  ವೇದಾವತಿ, ತಾ.ಪಂ. ಸ್ಥಾಯಿಸಮಿತಿ ಅಧ್ಯಕ್ಷ ವಿ.ಟಿ ಸೆಬಾಸ್ಟಿಯನ್, ಸದಸ್ಯ ಜಯರಾಮ ಆಲಂಗಾರು, ಕೃಷಿ ಅಧಿಕಾರಿ ಪ್ರೇಮಾ ಡಿ ಕಾಂಬ್ಲೆ, ವಲಯ ಅರಣ್ಯಅಧಿಕಾರಿ ಸುಬ್ಬಯ ನಾಯ್ಕ, ಶಿಕ್ಷಣ ಇಲಾಖೆಯ ಸುಭಾಶ್ ಜಾದವ್, ತೋಟಗಾರಿಕೆ ಇಲಾಖೆಯ ಶಿವಪ್ರಕಾಶ್, ಮಹಾವೀರ್, ಕೃಷಿ ಇಲಾಖೆಯ ಚಿದಾನಂದ ಹೂಗಾರ್, ಉಮೇರ ಜಬಿನ್, ತಾ.ಪಂ ಸದಸ್ಯರು, ಗ್ರಾ.ಪಂ ಸದಸ್ಯರು, ಎಪಿಎಂಸಿ ಪದಾಧಿಕಾರಿಗಳು, ಕೃಷಿಕ ಸಮಾಜದ ಪದಾಧಿಕಾರಿಗಳು, ರೈತಸಂಘದ ಸದಸ್ಯರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.